ಬೆಂಗಳೂರು: ರಾಜ್ಯದಲ್ಲಿ ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ತಮ್ಮ ಬಜೆಟ್ (Karnataka Budget 2024) ಮಂಡನೆಯ ವೇಳೆ ಹೇಳಿದ್ದಾರೆ.
ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ. ಅನುದಾನ ನೀಡಲಾಗುವುದು. ರಾಜ್ಯದ 10 ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೇಬಲ್ ಕಾರ್/ರೋಪ್ ವೇ ಸೌಲಭ್ಯ ಒದಗಿಸಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಮಂಗಳೂರಿಗೆ ವಾಟರ್ ಮೆಟ್ರೋ?
Advertisement
ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಗೋಕಾಕ್ ಜಲಪಾತ ಪ್ರೇಕ್ಷಣಿಯ ಸ್ಥಳವಾಗಿ ಅಭಿವೃದ್ಧಿಪಡಿಸಲಾಗುವುದು. ರಾಜ್ಯದ 530 ಸಂರಕ್ಷಿತ ಸ್ಮಾರಕಗಳನ್ನ 3ಡಿ ಲೇಸರ್ ಸ್ಕ್ಯಾನಿಂಗ್ ಮೂಲಕ ಡಿಜಿಟಲ್ ದಾಖಲೀಕರಣ, ಕೆಎಸ್‍ಟಿಡಿಸಿ ವತಿಯಿಂದ ಬಾಗಲಕೋಟೆ ಜಿಲ್ಲೆ ಐಹೊಳೆಯಲ್ಲಿ ಸುಸಜ್ಜಿತ ಹೋಟೆಲ್ ನಿರ್ಮಾಣ ಮಾಡುವ ಗುರಿ ಇದೆ ಎಂದು ತಿಳಿಸಿದರು.
Advertisement
Advertisement
ಬೀದರ್ ಮತ್ತು ವಿಜಯಪುರಲ್ಲಿ ಪುರಾತನ ನೀಡು ಸರಬರಾಜು ವ್ಯವಸ್ಥೆ ಪುನಶ್ಚೇತನಕ್ಕೆ 15 ಕೋಟಿ ಅನುದಾನ ನೀಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ. ಜೊತೆಗೆ ಬಂಡೀಪುರ, ದಾಂಡೇಲಿ, ಕಬಿನಿಯಲ್ಲಿ 25 ಕೋಟಿ ವೆಚ್ಚದಲ್ಲಿ ಇಂಟರ್‍ಪ್ರಿಟೇಷನ್ ಸೆಂಟರ್ ಹಾಗೂ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವರದ್ಧಿ ಮಂಡಳಿ ರಚನೆಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಿಎಂ ಹೇಳಿದರು.