ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಬೀಳುತ್ತಿರುವ ಹಿನ್ನೆಲೆ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಡ್ಯಾಂ 100 ಅಡಿ ಭರ್ತಿಯಾಗಿದೆ.
ಕಳೆದ 15 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಚುರುಕು ಪಡೆದಿದ್ದು, ಇದರಿಂದ ಕೆಆರ್‌ಎಸ್ ಡ್ಯಾಂಗೆ (KRS Dam) ಎರಡು ವಾರದಿಂದ ಪ್ರತಿದಿನ ಸರಾಸರಿ 10 ಸಾವಿರ ಕ್ಯೂಸೆಕ್ ಒಳಹರಿವು ಬರುತ್ತಿದೆ. ಇದರ ಬೆನ್ನಲ್ಲೇ ಇದೀಗ 100 ಅಡಿಗೆ ಕೆಆರ್‌ಎಸ್ ಡ್ಯಾಂ ಭರ್ತಿಯಾಗಿದೆ.
ಕೆಆರ್‌ಎಸ್ 100 ಅಡಿ ಭರ್ತಿ ಹಿನ್ನೆಲೆ ರೈತರ ಮುಖದಲ್ಲಿ ಮಂದಹಾಸ ಮೂಡಿದ್ದು, ಇದೇ ತಿಂಗಳ 8 ರಿಂದ ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಬಿಡುವುದಾಗಿಯು ಸಹ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಇನ್ನಷ್ಟು ಚುರುಕುಗೊಂಡರೆ ಶೀಘ್ರವಾಗಿ ಕೆಆರ್‌ಎಸ್ ಭರ್ತಿಯಾಗಲಿದೆ. ಇದನ್ನೂ ಓದಿ: ಅಮರನಾಥ ಯಾತ್ರೆಯ ಬಳಿಕ ಜಮ್ಮು ಕಾಶ್ಮೀರದಲ್ಲಿ ಚುನಾವಣೆ – ತಯಾರಿ ಆರಂಭಿಸಿದ ಬಿಜೆಪಿ
ಇಂದಿನ ಕೆಆರ್‌ಎಸ್ ನೀರಿನ ಮಟ್ಟ:
ಗರಿಷ್ಠ ಮಟ್ಟ – 124.80 ಅಡಿ.
ಇಂದಿನ ಮಟ್ಟ – 100.30 ಅಡಿ.
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 23.047 ಟಿಎಂಸಿ
ಒಳ ಹರಿವು – 9,686 ಕ್ಯೂಸೆಕ್
ಹೊರ ಹರಿವು – 546 ಕ್ಯೂಸೆಕ್