ನವದೆಹಲಿ: ಕಂತೆ ಕಂತೆ ನೋಟ್ ಸಿಕ್ಕ ನ್ಯಾ.ಯಶವಂತ್ ವರ್ಮಾ (Justice Yashwant Varma) ಪದಚ್ಯುತಿಗೆ ಸಂಸತ್ತಿನಲ್ಲಿ ನಿರ್ಣಯ ಮಂಡಿಸುವ ನೋಟಿಸ್‌ಗೆ ಈಗಾಗಲೇ 100 ಸಂಸದರು ಸಹಿ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು (Kiren Rijiju) ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಪದಚ್ಯುತಗೊಳಿಸುವ ಅಧಿಕಾರ ಸಂಸತ್ತಿಗೆ ಇದೆ. ನ್ಯಾಯಾಧೀಶರ ಪದಚ್ಯುತಿಗೆ ಲೋಕಸಭೆಯಲ್ಲಿ ಕನಿಷ್ಠ 100 ಸಂಸದರು ಮತ್ತು ರಾಜ್ಯಸಭೆಯಲ್ಲಿ 50 ಸಂಸದರು ಸಹಿ ಹಾಕಬೇಕು. ಸೋಮವಾರ ಆರಂಭವಾಗಲಿರುವ ಸಂಸತ್‌ನ ಮುಂಗಾರು ಅಧಿವೇಶನದಲ್ಲಿ (Monsoon Session) ನಿರ್ಣಯ ಮಂಡಿಸುವುದಾಗಿ ಈಗಾಗಲೇ ಸರ್ಕಾರ ಸ್ಪಷ್ಟಪಡಿಸಿದೆ. ಇದನ್ನೂ ಓದಿ: Belagavi | ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಮಗ ಸಾವು
ನಿರ್ಣಯವನ್ನು ಯಾವಾಗ ಮಂಡಿಸಬೇಕು ಎಂಬುದನ್ನು ನಿರ್ಧರಿಸುವುದು ಸದನಗಳ ಕಾರ್ಯಸೂಚಿಗಳನ್ನು ಅಂತಿಮಗೊಳಿಸುವ ಕಲಾಪ ಸಲಹಾ ಸಮಿತಿಯ ಜವಾಬ್ದಾರಿಯಾಗಿದೆ. ಆದ್ದರಿಂದ ನಿರ್ಣಯ ಮಂಡಿಸುವ ದಿನಾಂಕದ ಬಗ್ಗೆ ಯಾವುದೇ ಘೋಷಣೆ ಮಾಡುವುದಿಲ್ಲ ಎಂದು ಕಿರಣ್ ರಿಜಿಜು ಹೇಳಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಭಾರೀ ಮಳೆ – 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್