ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಪಡೆದು ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರದ ಗದ್ದುಗೆ ಏರಿದೆ. ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ ಶಿವಕುಮಾರ್ (DK Shivakumar) ಶನಿವಾರ ಪ್ರಮಾಣವಚನ ಸ್ವೀಕರಿಸಿದರು.
Advertisement
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸಿದ್ದರಾಮಯ್ಯ ಸಂಪುಟ ದರ್ಜೆ ಸಚಿವರಾಗಿ 8 ಮಂದಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇದನ್ನೂ ಓದಿ: ಕುರಿ ಲೆಕ್ಕ ಹಾಕಲು ಬಾರದವನಿಗೆ ಹಣಕಾಸು ಖಾತೆ ಯಾಕೆ ಎಂದಿದ್ದವರಿಗೆ 13 ಬಜೆಟ್ ಮಂಡಿಸಿ ಠಕ್ಕರ್ ಕೊಟ್ಟ ‘ಟಗರು’!
Advertisement
ಕಾರ್ಯಕ್ರಮದ ಬಳಿಕ ಪಬ್ಲಿಕ್ ಟಿವಿಯೊಂದಿಗೆ (Public TV) ಮಾತನಾಡಿದ ಕಾಂಗ್ರೆಸ್ ಮಾಜಿ ಸಂಸದೆ ಹಾಗೂ ನಟಿ ರಮ್ಯಾ (Ramya), ಕಾಂಗ್ರೆಸ್ ತನ್ನ 5 ಗ್ಯಾರಂಟಿಗಳನ್ನು 100 ಪರ್ಸೆಂಟ್ ಪೂರೈಸಲಿದೆ ಎಂದು ಹೇಳಿದರು.
Advertisement
Advertisement
ಈ ಬಾರಿ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೆ ಬಂದಿರೋದು ತುಂಬಾ ಖುಷಿಯಾಗಿದೆ. ಈ ಹಿಂದೆ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ 5 ವರ್ಷ ಉತ್ತಮ ಆಡಳಿತ ಕೊಟ್ಟಿದ್ದಾರೆ. ಈ ಬಾರಿಯೂ 5 ವರ್ಷ ಭ್ರಷ್ಟರಹಿತ ಆಡಳಿತವನ್ನ ಕಾಂಗ್ರೆಸ್ ಸರ್ಕಾರ ನೀಡಲಿದೆ. ಕೊಟ್ಟ ಮಾತಿನಂತೆ 5 ಗ್ಯಾರಂಟಿಗಳನ್ನೂ ಪೂರೈಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ತಂದೆಗೆ ಮಗ ಡಾಕ್ಟರ್ ಆಗ್ಬೇಕು ಅನ್ನೋ ಆಸೆ; ಆದ್ರೆ ಸಿದ್ದು ಆಗಿದ್ದು ವಕೀಲ, ಮಾಡಿದ್ದು ರಾಜಕೀಯ
ಕಾಂಗ್ರೆಸ್‌ನವರು ಸುಮ್ಮನೆ ಮಾತು ಕೊಡಲ್ಲ, ಮಾತು ಕೊಟ್ಮೇಲೆ ಖಂಡಿತಾ ಈಡೇರಿಸುತ್ತಾರೆ. ಕಾಂಗ್ರೆಸ್ ಮೇಲೆ ವಿಶ್ವಾಸವಿಡಬೇಕು. ಈಗಷ್ಟೇ ಅಧಿಕಾರಕ್ಕೆ ಬಂದಿರುವುದರಿಂದ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಆದ್ರೆ 100% ಕೊಟ್ಟ ಭರವಸೆಗಳನ್ನ ಈಡೇರಿಸಲಿದೆ ಎಂದರು.