ದಿಸ್ಪುರ್: ಸಂಸದ ರಾಹುಲ್ ಗಾಂಧಿ ಮಾಡಿರುವ ಒಂದು ವಿವಾದಾತ್ಮಕ ಟ್ವೀಟ್ ವಿರುದ್ಧ ಅಸ್ಸಾಂನ ವಿವಿಧ ಪೊಲೀಸ್ ಠಾಣೆಗಳಲ್ಲಿ 1,000 ಕ್ಕೂ ಹೆಚ್ಚು ದೂರುಗಳನ್ನು ಬಿಜೆಪಿ ಕಾರ್ಯಕರ್ತರು ದಾಖಲಿಸಿದ್ದಾರೆ.
Advertisement
ಬಿಜೆಪಿ ಯುವ ಮೋರ್ಚಾ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿರುವ ಬಗ್ಗೆ ಸ್ಪಷ್ಟಪಡಿಸಿದ್ದು, ಅಸ್ಸಾಂ ಬಿಜೆಪಿ ಯುವ ಮೋರ್ಚಾದ ಮಾಧ್ಯಮ ಸಂಚಾಲಕ ಬಿಸ್ವಜಿತ್ ಖೌಂಡ್ ಮಧ್ಯಮಗಳೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ಕೆಳದಿನಗಳ ಹಿಂದೆ ಮಾಡಿರುವ ಟ್ವೀಟ್ ಆಕ್ಷೇಪರ್ಹವಾಗಿದೆ. ಹಾಗಾಗಿ ರಾಹುಲ್ ಗಾಂಧಿ ವಿರುದ್ಧ ಯುವ ಮೋರ್ಚಾದ ಕಾರ್ಯಕರ್ತರು 1,000 ಕ್ಕೂ ಹೆಚ್ಚು ದೂರುಗಳನ್ನು ದಾಖಲಿಸಿದ್ದಾರೆ. ಅರುಣಾಚಲ ಪ್ರದೇಶವು ತನ್ನ ಭಾಗವಾಗಿದೆ ಎಂಬ ಚೀನಾದ ಹೇಳಿಕೆಯನ್ನು ರಾಹುಲ್ ಗಾಂಧಿ ಅವರ ಟ್ವೀಟ್ ಒಂದು ಪರೋಕ್ಷವಾಗಿ ಬೆಂಬಲಿಸುತ್ತದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ತ್ರಿವಳಿ ತಲಾಕ್ ವಿರುದ್ಧದ ಕಾನೂನು ಮುಸ್ಲಿಂ ಮಹಿಳೆಯರ ಕುಟುಂಬ ಉಳಿಸಿದೆ: ಮೋದಿ
Advertisement
Advertisement
ಅಲ್ಲದೇ ಪೊಲೀಸರಿಗೆ ಸಲ್ಲಿಸಿದ ದೂರಿನಲ್ಲಿ ಈ ಬಗ್ಗೆ ಸ್ಪಷ್ಟವಾಗಿ ತಿಳಿಸಿದ್ದೇವೆ. ರಾಹುಲ್ ಗಾಂಧಿ ಅವರ ಟ್ವೀಟ್ ಪ್ರತ್ಯೇಕತಾವಾದಿ ಮನಸ್ಥಿತಿಯನ್ನು ವ್ಯಕ್ತಪಡಿಸಿದೆ. ಇದು ಹಳೆಯ ಪಕ್ಷದ ಸಿದ್ಧಾಂತವನ್ನು ಮತ್ತೆ ತೋರಿಸಿದಂತಿದೆ. ಕಾಂಗ್ರೆಸ್ ಪಕ್ಷವು ಭಾರತಕ್ಕೆ ಅಪಾಯ. ರಾಹುಲ್ ಗಾಂಧಿ ಅವರು ಭಾರತದ ದೊಡ್ಡ ಸಮಸ್ಯೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹೆಲ್ಮೆಟ್ ಹಾಕಿದ್ರೆ ಸೇಫ್ಟಿ ಅಲ್ವಾ ಅದ್ಕೆ ಹಿಜಬ್ ಹಾಕಿದ್ರೆ ಸೇಫ್ಟಿ ಅಂದಿದ್ದು: ಜಮೀರ್ ಸಮರ್ಥನೆ
Advertisement
There is strength in our Union.
Our Union of Cultures.
Our Union of Diversity.
Our Union of Languages.
Our Union of People.
Our Union of States.
From Kashmir to Kerala. From Gujarat to West Bengal. India is beautiful in all its colours.
Don’t insult the spirit of India.
— Rahul Gandhi (@RahulGandhi) February 10, 2022
ಕಳೆದ ವಾರ ರಾಹುಲ್ ಗಾಂಧಿ ನಮ್ಮ ಸಂಸ್ಕೃತಿ, ವೈವಿಧ್ಯತೆ, ಭಾಷೆ, ಜನ, ರಾಜ್ಯಗಳ ನಡುವೆ ಒಂದು ಸಂಬಂಧವಿದೆ. ಅದು ನಮ್ಮ ಹೆಮ್ಮೆ. ಕಾಶ್ಮೀರದಿಂದ ಕೇರಳದವರೆಗೆ ಮತ್ತು ಗುಜರಾತ್‍ನಿಂದ ಪಶ್ಚಿಮ ಬಂಗಾಳದ ವರೆಗೆ ಭಾರತದ ವೈವಿಧ್ಯತೆ ಹರಡಿದೆ ಎಂದು ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿದ್ದರು. ಇದೀಗ ಈ ಟ್ವೀಟ್‍ನಲ್ಲಿ ಈಶಾನ್ಯ ಭಾಗದ ರಾಜ್ಯಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಅಸ್ಸಾಂನ ಬಿಜೆಪಿ ಯುವ ಮೋರ್ಚಾ ದೂರು ದಾಖಲಿಸಿದೆ. ಇದನ್ನೂ ಓದಿ: ಇವರ ಒತ್ತಡಕ್ಕೆ ಮಣಿಯುತ್ತಾ ಹೋದ್ರೆ ದೇಶವನ್ನೇ ತುಂಡರಿಸುತ್ತಾರೆ – ಖಾದರ್ ವಿರುದ್ಧ ಸಿಂಹ ಕಿಡಿ
ಅಸ್ಸಾಂನ ವಿವಿಧ ಪೊಲೀಸ್ ಠಾಣೆಗಳ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಮಹಾ ನಿರ್ದೇಶಕರು, ರಾಜ್ಯದಲ್ಲಿ ಒಟ್ಟು 329 ಪೊಲೀಸ್ ಠಾಣೆಗಳು, 293 ಔಟ್‌ಪೋಸ್ಟ್‌ಗಳು ಮತ್ತು 151 ಗಸ್ತು ಠಾಣೆಗಳಿವೆ. ರಾಜ್ಯದಲ್ಲಿರುವ ಹೊರ ಠಾಣೆ ಹಾಗೂ ಗಸ್ತು ಠಾಣೆಗಳಲ್ಲಿ ದೂರು ದಾಖಲಿಸಬಹುದಾದರೂ ಪೊಲೀಸ್ ಠಾಣೆಯಲ್ಲಿ ಮಾತ್ರ ಪ್ರಕರಣ ದಾಖಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.