ನವದೆಹಲಿ: 77ನೇ ಸ್ವಾತಂತ್ರ್ಯೋತ್ಸವ (77th Independence Day) ಹಿನ್ನೆಲೆಯಲ್ಲಿ ದೆಹಲಿಯ ಕೆಂಪು ಕೋಟೆ (Red Fort) ಸುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ. 10,000 ಪೊಲೀಸರು ಹಾಗೂ 1,000 ಮುಖ ಗುರುತಿಸುವಿಕೆ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಮಂಗಳವಾರದಂದು 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಆಗಸ್ಟ್ 15 ರಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಂಡ ಹಿಜ್ಬುಲ್ ಭಯೋತ್ಪಾದಕನ ಸಹೋದರ
Advertisement
Advertisement
ಹರಿಯಾಣದ ನುಹ್ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರವನ್ನು ಗಮನದಲ್ಲಿಟ್ಟುಕೊಂಡು ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಂಪು ಕೋಟೆಯಲ್ಲಿ ಡ್ರೋನ್ ವಿರೋಧಿ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ. ವಾಯು ರಕ್ಷಣಾ ಗನ್‌ಗಳನ್ನು ಅಳವಡಿಸುವುದು ಸೇರಿದಂತೆ ಎಲ್ಲಾ ಭಯೋತ್ಪಾದನಾ ವಿರೋಧಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಧಾನ ಮಂತ್ರಿ ಮತ್ತು ಇತರ ವಿವಿಐಪಿ ಅತಿಥಿಗಳ ಭದ್ರತೆಗಾಗಿ ಸ್ನೈಪರ್‌ಗಳು, ಗಣ್ಯ SWAT ಕಮಾಂಡೋಗಳು ಮತ್ತು ಶಾರ್ಪ್‌ಶೂಟರ್‌ಗಳನ್ನು ಕಾರ್ಯತಂತ್ರದ ಸ್ಥಳಗಳಲ್ಲಿ ಇರಿಸಲಾಗುತ್ತದೆ.
Advertisement
ಭದ್ರತಾ ವ್ಯವಸ್ಥೆಗಳ ವಿವರಗಳನ್ನು ಹಂಚಿಕೊಂಡಿರುವ ಪೊಲೀಸ್ ವಿಶೇಷ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ದೇಪೇಂದ್ರ ಪಾಠಕ್, ಈ ವರ್ಷ COVID-19 ಯಾವುದೇ ನಿರ್ಬಂಧಗಳಿಲ್ಲದೇ ಸ್ವಾತಂತ್ರ್ಯ ದಿನಾಚರಣೆಯನ್ನು ಉತ್ಸಾಹದಿಂದ ಆಚರಿಸಲಾಗುವುದು. ಆದ್ದರಿಂದ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಮಾಚಲದಲ್ಲಿ ಮೇಘಸ್ಫೋಟಕ್ಕೆ 7 ಬಲಿ – ಕೊಚ್ಚಿ ಹೋದ ಮನೆಗಳು
Advertisement
ನಾವು ಭದ್ರತೆಯನ್ನು ಒದಗಿಸಲು ಇತರ ಏಜೆನ್ಸಿಗಳೊಂದಿಗೆ ಮಾಹಿತಿ ಸಂಯೋಜಿಸುತ್ತೇವೆ. ದೆಹಲಿ ಪೊಲೀಸರು ಭದ್ರತಾ ಉದ್ದೇಶಗಳಿಗಾಗಿ ತಂತ್ರಜ್ಞಾನ ವ್ಯವಸ್ಥೆಯನ್ನು ಬಳಸಲಿದ್ದಾರೆ. ಭದ್ರತೆಗೆ ಸಂಬಂಧಿಸಿದಂತೆ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಪಿಎಂ-ಕಿಸಾನ್ ಯೋಜನೆಯ ಫಲಾನುಭವಿಗಳು ಸೇರಿದಂತೆ ಸುಮಾರು 1,800 ವಿಶೇಷ ಅತಿಥಿಗಳನ್ನು ಇಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಳ್ಳಲು ದೇಶಾದ್ಯಂತ ಸರ್ಕಾರ ಆಹ್ವಾನಿಸಿದೆ. ಈ ವರ್ಷ 20,000 ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ನಾಗರಿಕರು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.
Web Stories