ಲಕ್ನೋ: ಮುಜಾಫರ್‌ನಗರದಲ್ಲಿ (Muzaffarnagar) ನೋಂದಣಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಮದರಸಾಗಳು (Madras) ದಿನಕ್ಕೆ 10,000 ರೂ ದಂಡ (Penalty) ತೆರಬೇಕಾಗುತ್ತದೆ ಎಂದು ಉತ್ತರ ಪ್ರದೇಶದ (Uttar Pradesh) ಮೂಲ ಶಿಕ್ಷಣ ಇಲಾಖೆ ನೋಟಿಸ್ ಜಾರಿ ಮಾಡಿದೆ.
ಸರಿಯಾದ ದಾಖಲಾತಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ 10ಕ್ಕೂ ಹೆಚ್ಚು ಮದರಸಾಗಳಿಗೆ ಮೂಲ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ನೋಟಿಸ್ ಜಾರಿ ಮಾಡಿದ್ದು, ಸೂಕ್ತ ದಾಖಲೆಗಳನ್ನು ನೀಡುವಂತೆ ಸೂಚಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಉತ್ತರ ಪ್ರದೇಶದಲ್ಲಿ ಸುಮಾರು 24,000 ಮದರಸಾಗಳಿವೆ. ಅವುಗಳಲ್ಲಿ 16,000 ಮದರಸಾಗಳು ಮಾನ್ಯತೆ ಪಡೆದಿದ್ದು, 8,000 ಮದರಸಾಗಳು ಮಾನ್ಯತೆ ಪಡೆದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮದರಸಾದಲ್ಲಿ 10 ವಿದ್ಯಾರ್ಥಿಗಳಿಗೆ ಲೈಂಗಿಕ ದೌರ್ಜನ್ಯ – ಶಿಕ್ಷಕ ಅರೆಸ್ಟ್
Advertisement
Advertisement
ನೋಟಿಸ್ (Notice) ನೀಡಿರುವ ಮದರಸಾಗಳಿಗೆ ಆದೇಶ ಬಂದ ಮೂರು ದಿನಗಳೊಳಗೆ ಸೂಕ್ತ ದಾಖಲೆಗಳನ್ನು ನೀಡುವಂತೆ ಅಥವಾ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಮದರಸಾಗಳು ಮಾನ್ಯತೆ ಇಲ್ಲದೇ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದರೆ ದಿನಕ್ಕೆ 10,000 ರೂ. ದಂಡ ವಿಧಿಸಲಾಗುವುದು ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಭಾರತ ಅಭಿವೃದ್ಧಿಯಾದರೆ ಕೆಲವರ ಆಟ ನಡೆಯಲ್ಲ: ಮೋಹನ್ ಭಾಗವತ್
Advertisement
ಇಲ್ಲಿ ನಡೆಯುತ್ತಿರುವ ನೂರಕ್ಕೂ ಹೆಚ್ಚು ಮದರಸಾಗಳು ಜಿಲ್ಲೆಯಲ್ಲಿ ನೋಂದಣಿ ಅಥವಾ ಮಾನ್ಯತೆ ಹೊಂದಿಲ್ಲ ಮತ್ತು ನಿಯಮಾವಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಜಿಲ್ಲಾ ಅಲ್ಪಸಂಖ್ಯಾತ ಇಲಾಖೆ ತಮ್ಮ ಕಚೇರಿಗೆ ಮಾಹಿತಿ ನೀಡಿದೆ ಎಂದು ಮುಜಾಫರ್‌ನಗರ ಮೂಲ ಶಿಕ್ಷಾ ಅಧಿಕಾರಿ (BSA) ಶುಭಂ ಶುಕ್ಲಾ ಹೇಳಿದರು. ಇದನ್ನೂ ಓದಿ: ಮಣಿಪುರದಲ್ಲಿ ಓರ್ವ ಉಗ್ರ ಅರೆಸ್ಟ್ – ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Advertisement
ಮದರಸಾಗಳಿಗೆ ನೀಡಿದ ನೋಟಿಸ್‌ಗೆ ಸಂಬಂಧಿಸಿದಂತೆ ಭಾರತೀಯ ಮುಸ್ಲಿಮ್ ಸಂಘಟನೆಯಾದ ಜಮಿಯತ್ ಉಲಾಮಾ-ಇ-ಹಿಂದ್, ಶಿಕ್ಷಣ ಇಲಾಖೆಯ ಆದೇಶವನ್ನು ‘ಕಾನೂನುಬಾಹಿರ’ ಎಂದು ಕರೆದಿದೆ. ಮದರಸಾಗಳು ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿದ್ದು, ದಿನಕ್ಕೆ 10,000 ರೂ. ದಂಡವನ್ನು ಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದೆ. ಇದನ್ನೂ ಓದಿ: 25 ವರ್ಷಗಳ ಒಡನಾಟಕ್ಕೆ ಬ್ರೇಕ್ – BJPಗೆ ನಟಿ ಗೌತಮಿ ತಡಿಮಲ್ಲ ಗುಡ್‍ಬೈ
ಲಕ್ನೋದ ಹಿರಿಯ ಅಧಿಕಾರಿಯ ಪ್ರಕಾರ, ರಾಜ್ಯದ ಸುಮಾರು 4,000 ಮದರಸಾಗಳು ವಿದೇಶಿ ಹಣವನ್ನು ಸ್ವೀಕರಿಸುವ ಸ್ಕ್ಯಾನರ್ ಅಡಿಯಲ್ಲಿವೆ. ಈ 4,000 ಮದರಸಾಗಳನ್ನು ತನಿಖೆ ಮಾಡಲು ರಾಜ್ಯ ಸರ್ಕಾರವು ಮೂರು ಸದಸ್ಯರ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ. ಅವುಗಳಲ್ಲಿ ಹೆಚ್ಚಿನವು ಇಂಡೋ-ನೇಪಾಳ ಗಡಿಯಲ್ಲಿ ನಡೆಯುತ್ತಿವೆ. ಅವುಗಳು ವಿದೇಶದಿಂದ ಹಣವನ್ನು ಪಡೆಯುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಶಾಲೆಯಲ್ಲಿ ನಮಾಜ್ ಮಾಡಿದ ವಿದ್ಯಾರ್ಥಿಗಳು – ಪ್ರಾಂಶುಪಾಲೆ ಅಮಾನತು
ಮದರಸಾಗಳು ಪಡೆದ ಹಣವನ್ನು ಭಯೋತ್ಪಾದನೆ ಅಥವಾ ಬಲವಂತದ ಧಾರ್ಮಿಕ ಮತಾಂತರದಂತಹ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಸಲಾಗಿದೆಯೇ ಎಂದು ಎಸ್‌ಐಟಿ ಪರಿಶೀಲಿಸುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಸ್, ಕಾರಿನ ನಡುವೆ ಮುಖಾಮುಖಿ ಡಿಕ್ಕಿ – 6 ಜನ ಸಾವು
Web Stories