ಬಳ್ಳಾರಿ: ಮುಂಬರುವ ಫೆಬ್ರವರಿ ತಿಂಗಳಲ್ಲಿ ಕಂಪ್ಲಿ (Kampli) ವಿಧಾನಸಭಾ ಕ್ಷೇತ್ರಕ್ಕೆ ವಸತಿ ಇಲಾಖೆಯಿಂದ ಹೆಚ್ಚುವರಿಯಾಗಿ 10 ಸಾವಿರ ಮನೆಗಳನ್ನು ನೀಡಲಾಗುವುದು ಎಂದು ವಸತಿ, ವಕ್ಫ್, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಬಳ್ಳಾರಿ (Ballary) ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ (Zameer Ahmed) ಹೇಳಿದರು.
ಕಂಪ್ಲಿ ಪಟ್ಟಣದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಸಲುವಾಗಿ ಎಸ್.ಎನ್.ಪೇಟೆ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ಇದನ್ನೂ ಓದಿ: ಜೆಡಿಎಸ್ ಶಾಸಕ ರಾಜುಗೌಡ ಪಾಟೀಲ್‌ಗೆ ಮಾತೃ ವಿಯೋಗ
Advertisement
Advertisement
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಂಪ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಮಂಜೂರು ಮಾಡಿದರು. ನಮ್ಮ ಸರ್ಕಾರವು ಸರ್ವರಿಗೂ ಸೂರು ಸಿಗಲಿ ಎಂಬ ಉದ್ದೇಶ ಹೊಂದಿದೆ. ಈ ಹಿಂದೆ ವಿವಿಧ ಕಾರಣಗಳಿಂದಾಗಿ ನನೆಗುದಿಗೆ ಬಿದ್ದಿದ್ದ ಮನೆಗಳನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ನಿರ್ದೇಶನ ನೀಡಿದ್ದು, ಫೆಬ್ರವರಿ ತಿಂಗಳಲ್ಲಿ ಹಂತ ಹಂತವಾಗಿ ಮನೆ ವಿತರಿಸಲಾಗುವುದು ಎಂದು ಭರವಸೆ ನೀಡಿದರು.
Advertisement
ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು, ನಮ್ಮ ಇಲಾಖೆಗೆ ಸಾಕಷ್ಟು ಅನುದಾನ ನೀಡಿದ್ದು, ಯಾವುದೇ ಅನುದಾನದ ಕೊರತೆ ಇಲ್ಲ. ಅದೇ ರೀತಿಯಾಗಿ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಯಶಸ್ವಿಯಾಗಿ ಅನುಷ್ಠಾನಗೊಳಿಸಿ ನುಡಿದಂತೆ ನಡೆದುಕೊಂಡು ಬಂದಿದೆ. ಬಡಜನರ ಕಲ್ಯಾಣಕ್ಕಾಗಿ, ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಈ ಬಾರಿಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ 3,200 ಕೋಟಿ ರೂ. ನೀಡಲಾಗಿದೆ. ಈ ಪೈಕಿ 1,620 ಕೋಟಿ ರೂ. ಶಿಕ್ಷಣಕ್ಕೆ ವೆಚ್ಚ ಮಾಡಲಾಗುತ್ತಿದೆ ಎಂದರು.ಇದನ್ನೂ ಓದಿ: ಪೂರ್ಣವಾಗಿ ಲಾಕ್ ಆಗುತ್ತಿಲ್ಲ ಹಿಪ್ಪರಗಿ ಬ್ಯಾರಜ್‌ನ 7ನೇ ಗೇಟ್