ವಾಷಿಂಗ್ಟನ್: ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಹೊತ್ತಿಕೊಂಡಿರುವ ಭೀಕರ ಕಾಡ್ಗಿಚ್ಚು ಅಪಾರ ಹಾನಿಯುಂಟುಮಾಡಿದೆ. ಮುಗಿಲೆತ್ತರಕ್ಕೆ ಚಿಮ್ಮುತ್ತಿರುವ ಜ್ವಾಲೆ ನೆರೆಯ ಪ್ರದೇಶಗಳಿಗೂ ವ್ಯಾಪಿಸುತ್ತಿದೆ. ಸುತ್ತಲಿನ ಹಾಲಿವುಡ್ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುವ ಕಾರ್ಯಕ್ಕೆ ರಕ್ಷಣಾ ಸಿಬ್ಬಂದಿ ಚಾಲನೆ ನೀಡಿದ್ದಾರೆ.
ದುರ್ಘಟನೆಯಲ್ಲಿ ಈವರೆಗೆ ಐವರು ಸಜೀವ ದಹನವಾಗಿದ್ದಾರೆ. ಈ ನಡುವೆ 1,00,000 ಜನರ ಸ್ಥಳಾಂತರಕ್ಕೆ ಆದೇಶಿಸಲಾಗಿದೆ. ಸುಮಾರು 1,500 ಮನೆಗಳು ಸುಟ್ಟು ಭಸ್ಮವಾಗಿವೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಲಾಸ್ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು – 15,000 ಎಕ್ರೆ ಪ್ರದೇಶಕ್ಕೆ ಬೆಂಕಿ, ಐವರು ಸಜೀವ ದಹನ
Advertisement
Advertisement
ಲಾಸ್ ಏಂಜಲೀಸ್‌ನಾದ್ಯಂತ ನಿಯಂತ್ರಣ ಮೀರಿದ ಕಾಡ್ಗಿಚ್ಚು ಉಲ್ಬಣಗೊಳ್ಳುತ್ತಿರುವುದರಿಂದ, ಸನ್‌ಸೆಟ್ ಫೈರ್ ಎಂದು ಕರೆಯಲ್ಪಡುವ ಹೊಸ ಜ್ವಾಲೆಯು ಹಾಲಿವುಡ್ ಹಿಲ್ಸ್‌ನಲ್ಲಿ ಕಾಣಿಸಿಕೊಂಡಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 112 ಕಿಲೋ ಮೀಟರ್ ವೇಗದಲ್ಲಿ ಬೀಸುತ್ತಿರುವ ʻಸಾಂಟಾ ಅನಾʼ ಚಂಡಮಾರುತದಿಂದ ಪರಿಸ್ಥಿತಿ ಹದಗೆಡುತ್ತಲೇ ಇದೆ. ರನ್ಯಾನ್ ಕ್ಯಾನ್ಯನ್ ಮತ್ತು ವಾಟಲ್ಸ್ ಪಾರ್ಕ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಇದನ್ನೂ ಓದಿ: ಆರೋಗ್ಯಕರ ಮಗುವಿಗೆ ಜನ್ಮ ನೀಡುವ 25 ವರ್ಷದೊಳಗಿನ ಯುವತಿಯರಿಗೆ ಬಂಪರ್ ಬಹುಮಾನ!
Advertisement
ಲಾಸ್ ಏಂಜಲೀಸ್‌ನಲ್ಲಿ ಏನಾಗ್ತಿದೆ ? – ಪ್ರಮುಖ ಅಂಶಗಳು
Advertisement
* ಹಾಲಿವುಡ್ ಬೌಲೆವಾರ್ಡ್‌ನಿಂದ 100 ಮೀಟರ್ ದೂರದಲ್ಲಿ ಕಾಡ್ಗಿಚ್ಚು ವ್ಯಾಪಿಸಿದ್ದು, ಐತಿಹಾಸಿಕ ಹಾಲಿವುಡ್‌ನ ಹೃದಯಭಾಗದಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಲು ಬುಧವಾರವೇ ಆದೇಶ ನೀಡಲಾಗಿದೆ. ಜೊತೆಗೆ ಕಾಡ್ಗಿಚ್ಚು ಹಬ್ಬಿರುವ ಪ್ರದೇಶಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ.
* ಬೆಂಕಿ ಕೆನ್ನಾಲಿಗೆಗೆ ಈವರೆಗೆ ಸುಮಾರು 1,500 ಕಟ್ಟಡಗಳು ಸುಟ್ಟುಹೋಗಿವೆ. 1 ಲಕ್ಷ ಜನರನ್ನು ಸ್ಥಳಾಂತರಿಸಲು ಅಧಿಕಾರಿಗಳು ಆದೇಶಿಸಿದ್ದಾರೆ. ಜೊತೆಗೆ ನೈಸರ್ಗಿಕ ವಿಕೋಪವು ಪೆಸಿಫಿಕ್ ಪಾಲಿಸೇಡ್ಸ್ ಮತ್ತು ಮಾಲಿಬುವಿನಂತಹ ಐಷಾರಾಮಿ ಪ್ರದೇಶಗಳ ಮೇಲೂ ಪರಿಣಾಮ ಬೀರಿದೆ.
* ಒರೆಗಾನ್, ವಾಷಿಂಗ್ಟನ್ ಮತ್ತು ಉತಾಹ್ ಸೇರಿದಂತೆ ಹಲವು ರಾಜ್ಯಗಳಿಂದ ಸಾವಿರಾರು ಅಗ್ನಿಶಾಮಕ ದಳದ ಸಿಬ್ಬಂದಿ ಕಾಡ್ಗಿಚ್ಚು ನಿಯಂತ್ರಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
* ಲಾಸ್ ಏಂಜಲೀಸ್‌ನಲ್ಲಿ ನೀರಿನ ಅಭಾವದಿಂದಾಗಿ ಅಗ್ನಿಶಾಮಕ ದಳದವರು ಕಾಡ್ಗಿಚ್ಚು ನಂದಿಸುವ ಕಾರ್ಯಾಚರಣೆಯಲ್ಲಿ ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ನಡುವೆ ಸುತ್ತಲಿನ ಈಜುಕೊಳಗಳು ಮತ್ತು ಕೊಳಗಳಿಂದ ನೀರು ಸಂಗ್ರಹಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗಿದೆ.
* ಅಮೆರಿಕ ಅಧ್ಯಕ್ಷ ಜೋ ಬೈಡನ್ ವಿಪತ್ತು ಘೋಷಣೆಗೆ ಸಹಿ ಹಾಕಿದ್ದಾರೆ. ಕಾಡ್ಗಿಚ್ಚಿನಿಂದ ಆಶ್ರಯ ಕಳೆದುಕೊಂಡವರಿಗೆ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.