ಬೆಂಗಳೂರು: ಹೊಸ ವರ್ಷದ ಮೊದಲ ದಿನ ರಾಜ್ಯದಲ್ಲಿ ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ಭಾರೀ ಏರಿಕೆ ಕಂಡಿದೆ. 106 ದಿನಗಳ ಬಳಿಕ ಇಂದು ಒಟ್ಟು 1,033 ಕೇಸ್ ದಾಖಲಾಗಿದೆ. 5 ಮರಣ ಪ್ರಕರಣ ದಾಖಲಾಗಿದ್ದು, ಬೆಂಗಳೂರಿನಲ್ಲಿ ಬರೋಬ್ಬರಿ 810 ಕೇಸ್ ದಾಖಲಾಗುವ ಮೂಲಕ ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಕೊರೊನಾ ಜೊತೆಗೆ ಓಮಿಕ್ರಾನ್ ಒಟ್ಟು ಪ್ರಕರಣಗಳ ಸಂಖ್ಯೆ 66ಕ್ಕೆ ಏರಿಕೆ ಕಂಡಿದೆ.
ರಾಜ್ಯದಲ್ಲಿ ಇಂದು ಒಟ್ಟು 354 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 9,386ಕ್ಕೆ ಏರಿಕೆ ಕಂಡಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 30,08,370 ಮಂದಿಗೆ ಕೊರೊನಾ ಬಂದಿದೆ. 39,60,615 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.48 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.86 ರಷ್ಟಿದೆ. ಬೆಂಗಳೂರಿನಲ್ಲಿ 2, ಮಂಡ್ಯ, ತುಮಕೂರು ಮತ್ತು ಉತ್ತರ ಕನ್ನಡದಲ್ಲಿ ತಲಾ 1 ಮರಣ ಪ್ರಕರಣ ಸೇರಿ ಒಟ್ಟು 5 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪಿಎಂ ಕಿಸಾನ್ ಕರ್ನಾಟಕ: ವರ್ಷದ ಎರಡನೇ ಕಂತಿನ ನೆರವು 1007.18 ಕೋಟಿ ರೂ. ಬಿಡುಗಡೆ
ರಾಜ್ಯದಲ್ಲಿ ಇಂದು ಒಟ್ಟು 68,948 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,19,225 ಸ್ಯಾಂಪಲ್ (ಆರ್ಟಿಪಿಸಿಆರ್ 97,127 + 22,098 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ಗೆ ಕೊರೊನಾ ಪಾಸಿಟಿವ್
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 810, ಬೀದರ್ 2, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 10, ಚಿತ್ರದುರ್ಗ 4, ದಕ್ಷಿಣ ಕನ್ನಡ 48, ದಾವಣಗೆರೆ 0, ಧಾರವಾಡ 9, ಗದಗ 0, ಹಾಸನ 5, ಹಾವೇರಿ 0, ಕಲಬುರಗಿ 8, ಕೊಡಗು 13, ಕೋಲಾರ 6, ಕೊಪ್ಪಳ 0, ಮಂಡ್ಯ 23, ಮೈಸೂರು 29, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 8, ಉಡುಪಿ 28, ಉತ್ತರ ಕನ್ನಡ 5, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 0 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜನರನ್ನು ಸಜ್ಜುಗೊಳಿಸಬೇಕಾದ ಸಚಿವರು, ಶಾಸಕರಿಗೆ ಸೋಂಕು ತಗುಲಿರುವುದು ಆತಂಕಕಾರಿ: ಅಜಿತ್ ಪವಾರ್