Connect with us

Bengaluru City

ರಾಜ್ಯದಲ್ಲಿಂದು 1,005 ಹೊಸ ಕೊರೊನಾ ಪ್ರಕರಣ – 5 ಸಾವು, 1,102 ಡಿಸ್ಚಾರ್ಜ್

Published

on

ಬೆಂಗಳೂರು: ರಾಜ್ಯದಲ್ಲಿಂದು 1,005 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಐವರು ಸಾವನ್ನಪ್ಪಿದ್ದಾರೆ. ಇಂದು 1,102 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,14,488ಕ್ಕೆ ಏರಿಕೆಯಾಗಿದ್ದು, 12,044 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ 13,508 ಸಕ್ರಿಯ ಪ್ರಕರಣಗಳಿದ್ದು, 208 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.01 ಮತ್ತು ಮರಣ ಪ್ರಮಾಣ ಶೇ.0.49ರಷ್ಟಿದೆ. ಇಂದು 98,568 ಸ್ಯಾಂಪಲ್ ಗಳನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 2, ಬಳ್ಳಾರಿ 13, ಬೆಳಗಾವಿ 13, ಬೆಂಗಳೂರು ಗ್ರಾಮಾಂತರ 17, ಬೆಂಗಳೂರು ನಗರ 578, ಬೀದರ್ 5, ಚಾಮರಾಜನಗರ 12, ಚಿಕ್ಕಬಳ್ಳಾಪುರ 15, ಚಿಕ್ಕಮಗಳೂರು 10, ಚಿತ್ರದುರ್ಗ 13, ದಕ್ಷಿಣ ಕನ್ನಡ 30, ದಾವಣಗೆರೆ 7, ಧಾರವಾಡ 13, ಗದಗ 6, ಹಾಸನ 43, ಹಾವೇರಿ 2, ಕಲಬುರಗಿ 34, ಕೊಡಗು 5, ಕೋಲಾರ 3, ಕೊಪ್ಪಳ 3, ಮಂಡ್ಯ 24, ಮೈಸೂರು 79, ರಾಯಚೂರು 4, ರಾಮನಗರ 6, ಶಿವಮೊಗ್ಗ 7, ತುಮಕೂರು 19, ಉಡುಪಿ 13, ಉತ್ತರ ಕನ್ನಡ 14, ವಿಜಯಪುರ 12 ಮತ್ತು ಯಾದಗಿರಿಯಲ್ಲಿ 3 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

Click to comment

Leave a Reply

Your email address will not be published. Required fields are marked *