ಮುಂಬೈ: ತಾನು ಹುಟ್ಟಿದ ದಿನವೇ ಕೋವಿಡ್ 19 ಲಸಿಕೆ ಪಡೆದ 100ರ ಅಜ್ಜಿ ಎಲ್ಲಡೆ ಸುದ್ದಿಯಗಿದ್ದಾರೆ. ಮುಂಬೈನ ಬಂದ್ರ ಕುರ್ಲಾ ಕಾಂಪ್ಲೆಕ್ಸ್ ವ್ಯಾಕ್ಸಿನೇಷನ್ ಸೆಂಟರ್ನಲ್ಲಿ ಲಸಿಕೆ ಪಡೆದಿದ್ದಾರೆ.
ದೇಶದ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಲಸಿಕೆ ಹಾಕಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 100 ವರ್ಷ ಪೂರೈಸಿದ ಪಾರ್ವತಿ ಕೇಡ್ಕರ್ ತನ್ನ ಹುಟ್ಟುಹಬ್ಬದ ದಿನವೇ ಲಸಿಕೆ ಹಾಕಿಸಿಕೊಂಡಿದ್ದಾರೆ.
Advertisement
ಪಾರ್ವತಿ ಅಜ್ಜಿ ನೂರನೇ ವರ್ಷದ ಹುಟ್ಟುಹಬ್ಬವನ್ನು ಕೇಕ್ ಕಟ್ ಮಾಡುವ ಮೂಲಕವಾಗಿ ಆಚರಿಸಿ ಸಂಭ್ರಮಿಸಿದ್ದಾರೆ. ನಂತರ ಜನ್ಮದಿನಾಚರಣೆಯ ಅಂಗವಾಗಿ ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.
Advertisement
ಆರಂಭದಲ್ಲಿ ಆರೋಗ್ಯ ಸಿಬ್ಬಂದಿಗೆ ಲಸಿಕೆ ಹಾಕಿಸಿದ ಬಳಿಕ ಎರಡನೇ ಹಂತದಲ್ಲಿ ಮುಂಚೂಣಿಯಲ್ಲಿರುವ ಸಿಬ್ಬಂದಿಗೆ ಕೊರೊನಾ ಲಸಿಕೆ ಹಾಕಿಸಿಕೊಳ್ಳಲಉ ಅನುಮತಿ ನೀಡಲಾಗಿತ್ತು. ಮಾರ್ಚ್ 1 ರಿಂದ 60 ವರ್ಷ ಮೇಲ್ಪಟ್ಟ ಮತ್ತು 45 ವರ್ಷ ಮೇಲ್ಪಟ್ಟ ಅನಾರೋಗ್ಯದಿಂದ ಬಳಲುತ್ತಿರುವ ಜನರು ಲಸಿಕೆ ಪಡೆದುಕೊಳ್ಳಬಹುದು ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿತ್ತು.