ಕೊರೊನಾ ಏರಿಳಿತ – ಬೆಂಗ್ಳೂರಲ್ಲಿ ಎರಡಂಕಿಗೆ ಇಳಿಕೆ ಕಂಡ ಕೇಸ್

Public TV
1 Min Read
corona test 2

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಕೊರೊನಾ ಪಾಸಿಟಿವ್ ಕೇಸ್‍ಗಳಲ್ಲಿ ಏರಿಳಿತವಾಗುತ್ತಿದೆ. ಇಂದು ಒಟ್ಟು 103 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಈ ಮೂಲಕ ನಿನ್ನೆಗಿಂತ ಇಂದು 53 ಕೇಸ್‍ಗಳು ಇಳಿಕೆ ಕಂಡಿದೆ.

CORONA REPORT IN 14 05 2022.1

ನಿನ್ನೆ ರಾಜ್ಯದಲ್ಲಿ 156 ಪಾಸಿಟಿವ್ ಕೇಸ್ ಪತ್ತೆಯಾಗಿತ್ತು. ಬೆಂಗಳೂರು ನಗರದಲ್ಲೂ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಇಳಿಕೆ ಕಂಡಿದ್ದು, ಇಂದು 96 ಕೇಸ್ ದಾಖಲಾಗಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 0.54 ದಾಖಲಾಗಿದ್ದು, ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,868ಕ್ಕೆ ತಲುಪಿದೆ. ಇಂದು ಕೂಡ ಶೂನ್ಯ ಮರಣ ಮುಂದುವರಿದಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,063 ಮರಣ ಪ್ರಕರಣ ಪತ್ತೆಯಾಗಿದ್ದು, ಇಂದು 96 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: PSI ಪ್ರಕರಣದ ನಿಜವಾದ ಕಿಂಗ್‍ಪಿನ್‍ಗಳು ಬೆಂಗಳೂರಲ್ಲೇ ಇದ್ದಾರೆ, ಬಂಧಿತರೇ ಬೇರೆ: ಪ್ರಿಯಾಂಕ್ ಖರ್ಗೆ ಬಾಂಬ್

CORONA REPORT IN 14 05 2022.2

ಈವರೆಗೆ ರಾಜ್ಯದಲ್ಲಿ ಒಟ್ಟು 39,49,549 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,07,576 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 32,068 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 19,045 ಸ್ಯಾಂಪಲ್ (ಆರ್‌ಟಿಪಿಸಿಆರ್ 13,800 + 5,245 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಮದರಸಾಗಳಲ್ಲಿ ಓದಿದವರು ಹಿಂದೂ ವಿರೋಧಿ, ಭಯೋತ್ಪಾದಕರಾಗಿ ಬರ್ತಾರೆ – ಮುತಾಲಿಕ್ ಕಿಡಿ

CORONA REPORT IN 14 05 2022

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 96, ದಕ್ಷಿಣ ಕನ್ನಡ 5, ಬೆಂಗಳೂರು ಗ್ರಾಮಾಂತರ ಮತ್ತು ಧಾರವಾಡದಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 103 ಪ್ರಕರಣ ವರದಿಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *