– ಖಾಸಗಿ ಆಸ್ಪತ್ರೆ ಮಾಲೀಕನಿಗೆ ಕೊರೊನಾ ಪಾಸಿಟಿವ್
– ಸಿಂಗಾಪುರದಿಂದ ವಾಪಸ್ ಆಗಿದ್ದ ವ್ಯಕ್ತಿಗೆ ಕೋವಿಡ್
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 (Covid-19) ಪ್ರಕರಣಗಳು ಮತ್ತೆ ಹೆಚ್ಚುತ್ತಿವೆ. ಇಂದು (ಶನಿವಾರ) ಒಂದೇ ದಿನ 104 ಪಾಸಿಟಿವ್ ಕೇಸ್ ವರದಿಯಾಗಿವೆ. ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ.
Advertisement
ಶನಿವಾರ 8 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271 ಕ್ಕೆ ಏರಿಕೆ ಕಂಡಿದೆ. ಕೊರೊನಾ ಪಾಸಿಟಿವಿಟಿ ದರ 5.93% ಇದೆ. ಇದನ್ನೂ ಓದಿ: ಖಾಸಗಿ ಆಸ್ಪತ್ರೆ ಮಾಲೀಕನೂ ಆಗಿರುವ ಬಿಜೆಪಿ ಮುಖಂಡನಿಗೆ ಕೊರೊನಾ ಪಾಸಿಟಿವ್
Advertisement
Advertisement
ಸಿಲಿಕಾನ್ ಸಿಟಿ ಬೆಂಗಳೂರು ಕೊರೊನಾ ಹಾಟ್‌ಸ್ಪಾಟ್ ಆಗುತ್ತಿದೆ. ನಗರದಲ್ಲಿ ಕೋವಿಡ್ ಪ್ರಕರಣ ದಿನೇ ದಿನೇ ಏರಿಕೆ ಕಂಡಿದ್ದು, ಭೀತಿ ಮೂಡಿಸಿದೆ. ಇಂದು ಬೆಂಗಳೂರಿನಲ್ಲಿ 85 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಉಳಿದಂತೆ ಚಾಮರಾಜನಗರ ಜಿಲ್ಲೆಯಲ್ಲಿ 2, ದಕ್ಷಿಣ ಕನ್ನಡದಲ್ಲಿ 1, ಮಂಡ್ಯ 1, ಮೈಸೂರು 7, ಶಿವಮೊಗ್ಗ 6, ತುಮಕೂರಿನಲ್ಲಿ 2 ಪ್ರಕರಣಗಳು ದೃಢಪಟ್ಟಿವೆ.
Advertisement
ಸಿಂಗಾಪುರಕ್ಕೆ ತೆರಳಿದ ವ್ಯಕ್ತಿಗೆ ಕೊರೊನಾ
ಪ್ರವಾಸಕ್ಕೆಂದು ಸಿಂಗಾಪುರಕ್ಕೆ ತೆರಳಿದ್ದ ಮಂಡ್ಯ ಮೂಲದ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ. ಸಿಂಗಾಪುರ ಪ್ರವಾಸ ಮುಗಿಸಿ ಕಳೆದ ಮೂರು ದಿನಗಳ ಹಿಂದೆ ಮಂಡ್ಯಗೆ ವ್ಯಕ್ತಿ ವಾಪಸಾಗಿದ್ದ. ಆತನಿಗೆ ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ತೆರಳಿ ವ್ಯಕ್ತಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದ. ಇದೀಗ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ದೃಢಪಟ್ಟಿದೆ. ಇದನ್ನೂ ಓದಿ: ಕೊರೊನಾ ಆತಂಕದ ನಡುವೆಯೂ ವೈಕುಂಠ ಏಕಾದಶಿ ಸಂಭ್ರಮ – ಮಾಸ್ಕ್ ಮರೆತ ಜನ
ಸೋಂಕಿತ ವ್ಯಕ್ತಿಗೆ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, JN1 ದೃಢತೆಗಾಗಿ ಸೋಮವಾರ ಸೋಂಕಿತನ ಸ್ಯಾಂಪಲ್‌ನ್ನು ಲ್ಯಾಬ್‌ಗೆ ರವಾನೆ ಮಾಡಲಾಗುವುದು. ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿ ಇದ್ದ ಕುಟುಂಬಸ್ಥರನ್ನು ಮನೆಯಲ್ಲಿಯೇ ಕ್ವಾರಂಟೈನ್ ಮಾಡಲಾಗಿದ್ದು, ಅವರನ್ನು ಸಹ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಚಿಕ್ಕಬಳ್ಳಾಪುರ ನಗರದ ಖಾಸಗಿ ಆಸ್ಪತ್ರೆಯ ಮಾಲೀಕ ಹಾಗೂ ಬಿಜೆಪಿ ಮುಖಂಡರೊಬ್ಬರಿಗೆ ಕೊರೊನಾ ಪಾಸಿಟಿವ್ (Coron Positive) ಧೃಡವಾಗಿದೆ. ಇತ್ತೀಚೆಗಷ್ಟೇ ದೆಹಲಿ ಹಾಗೂ ತಮಿಳುನಾಡಿಗೆ ಹೋಗಿ ಬಂದಿದ್ದ 69 ವರ್ಷದ ಬಿಜೆಪಿ ಮುಖಂಡನಿಗೆ ಜ್ವರ ಕಾಣಿಸಿಕೊಂಡಿತ್ತು. ಸತತ 5 ದಿನಗಳ ನಿರಂತರ ಜ್ವರ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾರೆ. ಇದನ್ನೂ ಓದಿ: PublicTV Explainer: ಹೊಸ ವರ್ಷದ ಹೊತ್ತಲ್ಲೇ ದೇಶಕ್ಕೆ ಕಾಲಿಟ್ಟ ಕೊರೊನಾ ಹೊಸ ತಳಿ; ಏನಿದು ಜೆಎನ್.1? ಇದು ಅಪಾಯಕಾರಿಯೇ?