ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 1,046 ಕೊರೊನಾ ವರದಿಯಾಗಿದೆ. ಈ ಮೂಲಕ ನಿನ್ನೆಗಿಂತ ಇಂದು ಕೇಸ್ ಇಳಿಕೆ ಕಂಡಿದೆ.
Advertisement
ರಾಜ್ಯದಲ್ಲಿ ಬೆಂಗಳೂರು ನಗರ ಒಂದರಲ್ಲೇ 984 ಕೇಸ್ ಪತ್ತೆಯಾಗಿದೆ. ಈ ಮೂಲಕ ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 5,577ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದ ಬಳಿಕ ಜಿಲ್ಲೆಗಳ ಪೈಕಿ ಮೈಸೂರಿನಲ್ಲಿ ದಾಖಲಾದ 15 ಪ್ರಕರಣ ಜಿಲ್ಲೆಗಳ ಪೈಕಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ. ಇದೀಗ ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 5,896ಕ್ಕೆ ತಲುಪಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 4.03ಕ್ಕೆ ತಲುಪಿದೆ. ಇದನ್ನೂ ಓದಿ: ಜುಲೈ 1ರಿಂದ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಬ್ಯಾನ್ – ಮಾರಾಟ ಮಾಡಿದ್ರೆ ದುಬಾರಿ ದಂಡ
Advertisement
Advertisement
ಇಂದು 857 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,075 ಮರಣ ಪ್ರಕರಣ ಪತ್ತೆಯಾಗಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,69,411 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,23,398 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 32,524 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 25,931 ಸ್ಯಾಂಪಲ್ (ಆರ್ಟಿಪಿಸಿಆರ್ 18,430 + 7,501 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಬಿಜೆಪಿ `ಮಹಾ’ ಮಾಸ್ಟರ್ ಪ್ಲಾನ್ – ಅಂದು ಅಟೋ ಡ್ರೈವರ್ ಇಂದು ಚೀಫ್ ಮಿನಿಸ್ಟರ್
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 984, ಬೀದರ್ 2, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 2, ಚಿತ್ರದುರ್ಗ 1, ದಕ್ಷಿಣ ಕನ್ನಡ 5, ದಾವಣಗೆರೆ 1, ಧಾರವಾಡ 6, ಗದಗ 0, ಹಾಸನ 1, ಹಾವೇರಿ 0, ಕಲಬುರಗಿ 4, ಕೊಡಗು 0, ಕೋಲಾರ 6, ಕೊಪ್ಪಳ 1, ಮಂಡ್ಯ 0, ಮೈಸೂರು 15, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 3, ಉಡುಪಿ 4, ಉತ್ತರ ಕನ್ನಡ 1, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.