ಬೀದರ್: ಕಾಳಸಂತೆಯಲ್ಲಿ ಮಾರಾಟ ಮಾಡಲು ಹೊಲದಲ್ಲಿ ಸಂಗ್ರಹಿಸಿದ್ದ ಗ್ಯಾಸ್ ಸಿಲಿಂಡರ್‌ಗಳನ್ನು ಬೀದರ್ ಪೊಲೀಸರು (Bidar Police) ಭರ್ಜರಿ ಕಾರ್ಯಾಚರಣೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.
ದಾಳಿ ವೇಳೆ 2.55 ಲಕ್ಷ ರೂ.ಗೂ ಅಧಿಕ ಮೌಲ್ಯದ 105 ಸಿಲಿಂಡರ್‌ಗಳನ್ನು ಜಪ್ತಿ ಮಾಡಿದ್ದಾರೆ. ಗೃಹಬಳಕೆ ಮತ್ತು ವಾಣಿಜ್ಯ ಸಿಲಿಂಡರ್‌ಗಳು ಜಪ್ತಿ ಮಾಡಲಾಗಿದ್ದು, ಇಂಡಿಯನ್, ಹೆಚ್‌ಪಿ ಗ್ಯಾಸ್ ಸಿಲಿಂಡರ್ ಎಜೆನ್ಸಿಗಳಿಂದ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಇದನ್ನೂ ಓದಿ: ಶಿವಮೊಗ್ಗ | ವ್ಯಕ್ತಿಯ ಸಜೀವ ದಹನ – ಇಬ್ಬರಿಗೆ ಜೀವಾವಧಿ ಶಿಕ್ಷೆ
ಗ್ಯಾಸ್ ಸಿಲಿಂಡರ್ ಸಮಸ್ಯೆಯಿಂದಾಗಿ ಒಂದು ಸಾವಿರವಿದ್ದ ಗೃಹ ಬಳಕೆ ಎಲ್‌ಪಿಜಿ ಗ್ಯಾಸ್ ಎರಡು ಸಾವಿರಕ್ಕೂ ಅಧಿಕ ಬೆಲೆಗೆ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಬಂಡವಾಳ ಮಾಡಿಕೊಂಡ ಏಜೆನ್ಸಿಗಳು ಜನವಾಡ ಗ್ರಾಮದ ಹೊಲದಲ್ಲಿ ಸಿಲಿಂಡರ್‌ಗಳನ್ನು ಸಂಗ್ರಹಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬೀದರ್ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಸದ್ಯ ನ್ಯಾಯಾಲಯ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.ಇದನ್ನೂ ಓದಿ: SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

