ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೊನಾ ಪ್ರಕರಣಗಳ ಸಂಖ್ಯೆ ಸಾವಿರದ ಗಡಿ ದಾಟಿದೆ. ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ.
ಇಂದು 1,053 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರು ನಗರದಲ್ಲಿ 966 ಜನರಿಗೆ ಕೊರೊನಾ ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ 6,454 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಇಂದು 1080 ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಮತ್ತೊಂದು ಉಪತಳಿ ಪತ್ತೆ- ರೋಗನಿರೋಧಕ ಶಕ್ತಿ ಮೀರಿಸಿ ವೈರಸ್ ಹರಡುತ್ತಾ ಈ ತಳಿ – WHO ಹೇಳಿದ್ದೇನು?
27,086 ಜನರು ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡಿದ್ದು, ಇಲ್ಲಿವರೆಗೂ 6,71,61,436 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಕರಣ ಶೇ.3.88 ಮತ್ತು ಮರಣ ಪ್ರಮಾಣ ಶೇ.0.00 ದಾಖಲಾಗಿದೆ.
ಇಂದು 1,080 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 18,574 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 27,086 ಸ್ಯಾಂಪಲ್(ಆರ್ಟಿಪಿಸಿಆರ್ 19,468 + 7,618 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ವಿದ್ಯುತ್ ಬಿಲ್ ಪಾವತಿಗೆ 6 ತಿಂಗಳ ಕಾಲಾವಕಾಶ ಇಲ್ಲ: ಬೆಸ್ಕಾಂ ಸ್ಪಷ್ಟನೆ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 01, ಬಳ್ಳಾರಿ 04, ಬೆಳಗಾವಿ 01, ಬೆಂಗಳೂರು ಗ್ರಾಮಾಂತರ 04, ಬೆಂಗಳೂರು ನಗರ 966, ಬೀದರ್ 01, ಚಾಮರಾಜನಗರ 01, ಚಿಕ್ಕಮಗಳೂರು 04, ದಕ್ಷಿಣ ಕನ್ನಡ 15, ದಾವಣಗೆರೆ 03, ಧಾರವಾಡ 9, ಹಾಸನ 06, ಹಾವೇರಿ 01, ಕೋಲಾರ 08, ಮಂಡ್ಯ 03, ಮೈಸೂರು 10, ರಾಮನಗರ 03, ಶಿವಮೊಗ್ಗ 03, ತುಮಕೂರು 03, ಉಡುಪಿ 04, ಉತ್ತರ ಕನ್ನಡ 03 ಹಾಗೂ ಉಳಿದ ಜಿಲ್ಲೆಗಳಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿವೆ.