Advertisements

ರಾಜ್ಯದಲ್ಲಿ ಇಂದು 107 ಮಂದಿಗೆ ಕೊರೊನಾ ದೃಢ- ಶೂನ್ಯ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 107 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾದಿಂದ ಯಾರೂ ಮೃತಪಟ್ಟಿಲ್ಲ.

Advertisements

ರಾಜ್ಯದಲ್ಲಿ ಇಂದು ಒಟ್ಟು 7,114 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಮೂಲಕ ಇದುವರೆಗೆ 6,58,95,663 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,815 ಇದೆ. ಇಂದು ಆಸ್ಪತ್ರೆಯಿಂದ 107 ಮಂದಿ ಬಿಡುಗಡೆಗೊಂಡಿದ್ದಾರೆ. ಇದುವರೆಗೆ 39,06,027 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಪಾಸಿಟಿವಿಟಿ ರೇಟ್ ಶೇ.1.50 ಇದೆ. ಇದನ್ನೂ ಓದಿ: ಗೋಹತ್ಯೆ ಮಾಡಿದ್ದೀರೆಂದು ಮನೆಗೆ ನುಗ್ಗಿ ಇಬ್ಬರು ಆದಿವಾಸಿಗಳ ಮೇಲೆ ಹಲ್ಲೆ ನಡೆಸಿ ಕೊಲೆ

Advertisements

ಬೆಂಗಳೂರಿನಲ್ಲಿ 100 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇಂದು ನಗರದಲ್ಲಿ 103 ಮಂದಿ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,47,944 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,06,027 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 7,114 ಸ್ಯಾಂಪಲ್ (ಆರ್‍ಟಿ ಪಿಸಿಆರ್ 4,987 + 2127 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

ಇಂದಿನ ಹೆಲ್ತ್ ಬುಲೆಟಿನ್ ಪ್ರಕಾರ, ಬೆಂಗಳೂರು ನಗರ 100, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 1, ಚಿತ್ರದುರ್ಗ 3, ಮೈಸೂರು 1, ಉತ್ತರ ಕನ್ನಡ 1 ಹಾಗೂ ಉಳಿದ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

Advertisements

Advertisements
Exit mobile version