ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಒಂದು ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣ ದಾಖಲಾಗಿದೆ. ಇಂದು ಒಟ್ಟು 1,073 ಕೊರೊನಾ ವರದಿಯಾಗಿದೆ. ಜೊತೆಗೆ ಏಕೈಕ ಮರಣ ಪ್ರಕರಣ ದಾಖಲಾಗಿದೆ.
Advertisement
ಬೆಂಗಳೂರು ನಗರ ಒಂದರಲ್ಲೇ ಪಾಸಿಟಿವ್ ಕೇಸ್ಗಳ ಸಂಖ್ಯೆ ಒಂದು ಸಾವಿರ ಗಡಿದಾಟಿದೆ. ಇಂದು ನಗರದಲ್ಲಿ 1,008 ಪ್ರಕರಣ ಪತ್ತೆಯಾಗಿದೆ. ಈ ಮೂಲಕ ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 5,814ಕ್ಕೆ ಏರಿಕೆ ಕಂಡಿದೆ. ಜೊತೆಗೆ ರಾಜ್ಯದಲ್ಲಿ ದಾಖಲಾದ ಏಕೈಕ ಮರಣ ಪ್ರಕರಣ ಬೆಂಗಳೂರಿನಲ್ಲೇ ದಾಖಲಾಗಿದೆ. ಬೆಂಗಳೂರು ನಗರದ ಬಳಿಕ ಜಿಲ್ಲೆಗಳ ಪೈಕಿ ಮೈಸೂರಿನಲ್ಲಿ ದಾಖಲಾದ 12 ಪ್ರಕರಣ ಜಿಲ್ಲೆಗಳ ಪೈಕಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ. ಇದೀಗ ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 6,134ಕ್ಕೆ ತಲುಪಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 4.19ಕ್ಕೆ ತಲುಪಿದೆ. ಇದನ್ನೂ ಓದಿ: ಭಾರೀ ಮಳೆಗೆ ಪಂಜ-ಉಳ್ಯ ಜಲಾವೃತ – ಆತಂಕದಲ್ಲಿ ಕೃಷಿಕರು
Advertisement
Advertisement
ಇಂದು 834 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,076 ಮರಣ ಪ್ರಕರಣ ಪತ್ತೆಯಾಗಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,70,484 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,24,232 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 40,103 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 25,587 ಸ್ಯಾಂಪಲ್ (ಆರ್ಟಿಪಿಸಿಆರ್ 18,273 + 7,314 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಕಸ ಎಸೆಯಲು ಹೋದ ಮಹಿಳೆ ಮೇಲೆ ಹಂದಿ ದಾಳಿ
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 1, ಬಳ್ಳಾರಿ 9, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 1,008, ಬೀದರ್ 2, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 3, ಚಿತ್ರದುರ್ಗ 2, ದಕ್ಷಿಣ ಕನ್ನಡ 10, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 2, ಹಾವೇರಿ 2, ಕಲಬುರಗಿ 1, ಕೊಡಗು 0, ಕೋಲಾರ 2, ಕೊಪ್ಪಳ 1, ಮಂಡ್ಯ 0, ಮೈಸೂರು 12, ರಾಯಚೂರು 0, ರಾಮನಗರ 1, ಶಿವಮೊಗ್ಗ 1, ತುಮಕೂರು 8, ಉಡುಪಿ 4, ಉತ್ತರ ಕನ್ನಡ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.