ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಬೆಳಗುರ್ಕಿ ಗ್ರಾಮದ ಗರ್ಭಿಣಿಗೆ ಆಸ್ಪತ್ರೆ ಮಾರ್ಗ ಮಧ್ಯೆಯೇ ಆಂಬ್ಯುಲೆನ್ಸ್ನಲ್ಲಿ ಹೆರಿಗೆಯಾಗಿದೆ.
ಹೆರಿಗೆ ನೋವು ತೀವ್ರವಾಗಿ ಕಾಣಿಸಿಕೊಂಡಿದ್ದರಿಂದ 108 ಸಿಬ್ಬಂದಿ ಹೆರಿಗೆ ಮಾಡಿಸಿದ್ದಾರೆ. ಪ್ರಸ್ತುತ ತಾಯಿ ಪಾರ್ವತಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ-ಮಗಳು ಆರೋಗ್ಯವಾಗಿ ಇದ್ದಾರೆ.
Advertisement
Advertisement
ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಬಾದರ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲು ಆಂಬ್ಯುಲೆನ್ಸ್ಗೆ ಕರೆ ಮಾಡಲಾಗಿತ್ತು. ಆದರೆ ಆಸ್ಪತ್ರೆ ಮಾರ್ಗ ಮಧ್ಯೆದಲ್ಲೇ ನೋವು ತೀವ್ರಗೊಂಡಿದ್ದರಿಂದ ಶುಶ್ರೂಷಕ ಬಸವರಾಜ್ ಮಾರ್ಗ ಮಧ್ಯೆ ಆಂಬ್ಯುಲೆನ್ಸ್ನಲ್ಲೇ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಇದನ್ನೂ ಓದಿ: ಹೋಟೆಲ್ಗಳಿಗೆ ನಿಗದಿತ ವಿದ್ಯುತ್ ಶುಲ್ಕ ವಿನಾಯಿತಿ: ಬೆಸ್ಕಾಂ ಭರವಸೆ
Advertisement
Advertisement
ಹೆರಿಗೆಯಾದ ನಂತರ ತಾಯಿ ಮಗುವನ್ನು ಬಾದರ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.