ಚಾಮರಾಜನಗರ: ಯುವಕನೊಬ್ಬ ತನ್ನನ್ನು ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದನೆಂದು ಮನನೊಂದ ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಅಮ್ಮನಪುರದಲ್ಲಿ ನಡೆದಿದೆ.
ಜ್ಯೋತಿ (ಹೆಸರು ಬದಲಾಯಿಸಲಾಗಿದೆ) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ. ಚಾಮರಾಜನಗರ ತಾಲೂಕಿನ ರೇಚಂಬಳ್ಳಿ ಗ್ರಾಮದ ಮನು ಎಂಬ ಯುವಕ ಅಮ್ಮನಪುರದ ಜ್ಯೋತಿ ಎಂಬ 10ನೇ ತರಗತಿ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ. ವಿದ್ಯಾರ್ಥಿನಿ ನಾನು ಪ್ರೀತಿಸಲ್ಲಾ ಎಂದು ಹೇಳಿದ್ರು ಕೂಡ ಪದೇ ಪದೇ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದನು.
Advertisement
ಇದರಿಂದ ಮನನೊಂದ ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆ ಬೆಂಕಿ ಹಂಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಇದರಿಂದ ಜ್ಯೋತಿಯ ಮುಖ ಸೇರಿದಂತೆ ದೇಹದ ಬಹುತೇಕ ಭಾಗ ಸುಟ್ಟು ಹೋಗಿದೆ. ಸದ್ಯ ಜ್ಯೋತಿ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ. ಈ ಬಗ್ಗೆ ರಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.