ಮಂಗಳೂರು: ವಿವಾಹಿತ ಮಹಿಳೆಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಹೊರವಲಯದ ಗುರುಪುರ ಎಂಬಲ್ಲಿ ನಡೆದಿದೆ.
ಗುರುಪುರದ ಭಜನಾ ಮಂದಿರ ಬಳಿಯ ನಿವಾಸಿ ಶಿಲ್ಪಾ (28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತನ್ನ ಪೋಷಕರ ಮನೆಯಲ್ಲೇ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ.
ಜ್ಯುವೆಲ್ಲರ್ ಅಂಗಡಿಯ ಮಾಲೀಕರ ಪುತ್ರಿಯಾಗಿರುವ ಶಿಲ್ಪಾಗೆ ಮದುವೆಯಾಗಿದ್ದು, 11 ತಿಂಗಳ ಮಗು ಇದೆ. ತನ್ನ ಪತಿ ಹಾಗೂ 11 ತಿಂಗಳ ಮಗುವಿನೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದು, ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.
ಕೊರೊನಾ ಹಿನ್ನೆಲೆ ಲಾಕ್ಡೌನ್ ಬಳಿ ಶಿಲ್ಪಾ ತನ್ನ ಮಗುವಿನೊಂದಿಗೆ ಮಂಗಳೂರಿನ ಗುರುಪುರದ ತವರು ಮನೆಗೆ ಬಂದಿದ್ದರು. ಮನೆಯಲ್ಲಿಯೇ ವರ್ಕ್ ಫ್ರಮ್ ಹೋಂ ಮಾಡುತ್ತಿದ್ದರು. ಆದರೆ ಮನೆಯಲ್ಲಿ ಯಾರೂ ಇಲ್ಲದೆ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಸ್ಥಳೀಯ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಶಿಲ್ಪಾ ಆತ್ಮಹತ್ಯೆ ಮಾಡಿಕೊಳ್ಳಲು ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ.