– ಪತಿಯ ವಿರುದ್ಧ ದೂರು
ಮುಂಬೈ: ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ.
ಮಹಾರಾಷ್ಟ್ರದ ಪುಣೆಯ ಚಿಂಚ್ವಾಡ್ ಪ್ರದೇಶದಲ್ಲಿ ಘಟನೆ ನಡೆದಿದ್ದು, 11 ವರ್ಷದ ಬಾಲಕಿ ಮೇಲೆ ತಂದೆಯೇ ಅತ್ಯಾಚಾರ ಎಸಗಿದ್ದಾನೆ. 34 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತ್ನಿಯೆ ನಮಗೆ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಶನಿವಾರ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಎರಡು ವಾರಗಳ ಹಿಂದೆ ಆರೋಪಿ ತನ್ನ ಮನೆಯಲ್ಲಿಯೇ ಮಗಳ ಮೇಲೆ ಅತ್ಯಾಚಾರ ಎಸಗಿದ್ದ. ನಂತರ ಗುರುವಾರ ರಾತ್ರಿ ಮತ್ತೆ ತನ್ನ ಮನೆ ಬಳಿ ಇರುವ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.
ಈ ಕುರಿತು ಆತನ ಪತ್ನಿ ಅಂದರೆ ಬಾಲಕಿ ತಾಯಿ ದೂರು ನೀಡಿದ್ದು, ಈತ ಕಾರನ್ನು ವಿವಿಧ ಕಂಪನಿಗಳಿಗೆ ತನ್ನ ಕಾರನ್ನು ಬಾಡಿಗೆ ನೀಡಿ ಹಣ ಸಂಪಾದಿಸುತ್ತಿದ್ದ ಎಂದು ಆತನ ಪತ್ನಿ ತಿಳಿಸಿದ್ದಾರೆ ಎಂದು ದಿಘಿ ಪೊಲೀಸ್ ಠಾಣೆಯ ಸಬ್ ಇನ್‍ಸ್ಪೆಕ್ಟರ್ ಪಿ.ಎ.ಕದಮ್ ಮಾಹಿತಿ ನೀಡಿದ್ದಾರೆ.
ಈ ಕುರಿತು ದಿಘಿ ಪೊಲೀಸರು ಪ್ರತಿಕ್ರಿಯಿಸಿದ್ದು, ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376,376(2)(ಎಫ್) (ಲೈಂಗಿಕ ಕಿರುಕುಳ) ಹಾಗೂ ಪೊಕ್ಸೊ ಕಾಯ್ದೆಯ 3,4,7,8 ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.