ಲಕ್ನೋ: ಕಲ್ಲು ಬಂಡೆ ತುಂಬಿದ್ದ ಟ್ರಕ್ಕೊಂದು (Truck) ನಿಂತಿದ್ದ ಬಸ್‌ಗೆ (Bus) ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ (Uttara Pradesh) ಶಹಜಹಾನ್‌ಪುರದಲ್ಲಿ (Shahjahanpur) ನಡೆದಿದೆ.
ಖುತಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗೋಲಾ ಬೈಪಾಸ್ ರಸ್ತೆಯಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ಸೀತಾಪುರದಿಂದ ಪೂರ್ಣಗಿರಿಗೆ ತೆರಳುತ್ತಿದ್ದ ಖಾಸಗಿ ಬಸ್ ಶಹಜಾನ್‌ಪುರದ ಧಾಬಾದಲ್ಲಿ ನಿಂತಿತ್ತು. ಕಲ್ಲು ಬಂಡೆ ತುಂಬಿದ್ದ ಟ್ರಕ್ ಬಸ್‌ಗೆ ಡಿಕ್ಕಿ ಹೊಡೆದು ಅದರ ಮೇಲೆ ಪಲ್ಟಿಯಾದ ಪರಿಣಾಮ ಬಸ್‌ನಲ್ಲಿದ್ದ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮೇ 31ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ – ಹವಾಮಾನ ಇಲಾಖೆ ಮುನ್ಸೂಚನೆ
ಬಲಿಯಾದವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ. ಸುಮಾರು ಮೂರು ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯ ನಂತರ, ಟ್ರಕ್ ಅಡಿಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲಾಯಿತು. ಕ್ರೇನ್ ಮೂಲಕ ರಕ್ಷಣಾ ತಂಡ ಟ್ರಕ್ ಅಡಿಯಲ್ಲಿ ಸಿಲುಕಿದ್ದ ಯಾತ್ರಿಕರನ್ನು ಹೊರತೆಗೆದು ಅವಶೇಷಗಳನ್ನು ಸ್ಥಳಾಂತರಿಸಿತು. ಇದನ್ನೂ ಓದಿ: 27 ಮಂದಿ ಬಲಿಯಾದ ರಾಜ್‌ಕೋಟ್ ಗೇಮಿಂಗ್ ಸೆಂಟರ್‌ಗೆ ಇರಲಿಲ್ಲ Fire NOC
ರಾತ್ರಿ 11:30ರ ಸುಮಾರಿಗೆ ಗೋಲಾ ಬೈಪಾಸ್ ರಸ್ತೆಯಲ್ಲಿ ಕಲ್ಲು ತುಂಬಿದ ಟ್ರಕ್ ಡಾಬಾ ಬಳಿ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದು ಅದರ ಮೇಲೆ ಪಲ್ಟಿಯಾಗಿದೆ ಎಂದು ನಮಗೆ ಮಾಹಿತಿ ಸಿಕ್ಕಿತು. ಕೆಲವರು ಡಾಬಾದಲ್ಲಿ ಆಹಾರ ಸೇವಿಸುತ್ತಿದ್ದರು ಮತ್ತು ಇತರರು ಬಸ್‌ನೊಳಗೆ ಕುಳಿತಿದ್ದರು. ಘಟನೆಯಲ್ಲಿ 11 ಮಂದಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ. ನಾವು ಎಲ್ಲಾ ದೇಹಗಳನ್ನು ಹೊರತೆಗೆದಿದ್ದೇವೆ ಮತ್ತು ಅವರ ಕುಟುಂಬಗಳಿಗೆ ಮಾಹಿತಿ ನೀಡುತ್ತಿದ್ದೇವೆ ಎಂದು ಶಹಜಹಾನ್‌ಪುರ ಪೊಲೀಸ್ ಅಧೀಕ್ಷಕ ಅಶೋಕ್ ಕುಮಾರ್ ಮೀನಾ ತಿಳಿಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಕಾರು, ಟ್ರಕ್ ನಡುವೆ ಭೀಕರ ಅಪಘಾತ – ಚಿಕ್ಕಬಳ್ಳಾಪುರ ಮೂಲದ 6 ಮಂದಿ ದಾರುಣ ಸಾವು
ಗಾಯಾಳುಗಳನ್ನು ವೈದ್ಯಕೀಯ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ದುರಂತ -6 ನವಜಾತ ಶಿಶುಗಳು ಬಲಿ