ಮುಂಬೈ: ಮಹಾರಾಷ್ಟ್ರದ (Maharashtra) ನಾಸಿಕ್‍ನಲ್ಲಿ (Nashik) ಮುಂಬೈಗೆ (Mumbai) ತೆರಳುತ್ತಿದ್ದ ಬಸ್‍ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮಗು ಸೇರಿದಂತೆ 12 ಮಂದಿ ಸಾವನ್ನಪ್ಪಿದ್ದು, ಸುಮಾರು 38 ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಸಿಕ್‍ನ ನಾದುರಾ ನಾಕಾ ಬಳಿ ಮುಂಜಾನೆ 5:30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ನಾಸಿಕ್‍ನಿಂದ ಪುಣೆಗೆ ತೆರಳುತ್ತಿದ್ದ ಟ್ರಕ್‍ಗೆ ಯವತ್ಮಾಲ್‍ನಿಂದ ಮುಂಬೈಗೆ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಗಾಯಗೊಂಡ 38 ಮಂದಿಯಲ್ಲಿ ಮೂವರು ಗಂಭೀರರಾಗಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ ಇನ್ನು ಏರಿಕೆಯಾಗಬಹುದು, ವೈದ್ಯರ ದೃಢೀಕರಣದ ಬಳಿಕವೇ ನಿಖರವಾದ ಸಾವಿನ ಸಂಖ್ಯೆಯನ್ನು ಹೇಳಬಹುದು ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಮೃತರ ಮುಂದಿನ ಕುಟುಂಬಕ್ಕೆ 2 ಲಕ್ಷ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಅವರು ಘೋಷಿಸಿದ್ದಾರೆ. ಇದನ್ನೂ ಓದಿ: ಚಂದ್ರಶೇಖರ್ ಗುರೂಜಿ ಹತ್ಯೆಗೆ ಟ್ವಿಸ್ಟ್ – ವಾಟ್ಸಾಪ್ ಚಾಟ್ ತೆರೆದಿಡ್ತು ಕೊಲೆ ರಹಸ್ಯ
Advertisement
नाशिक (महाराष्ट्र) येथील रस्ता अपघात हृदय पिळवटून टाकणारा आहे. या भीषण अपघातात ज्यांनी आपला जीव गमावला त्यांच्या कुटुंबियांप्रती मी माझ्या संवेदना व्यक्त करतो आणि जे जखमी आहेत, ते लवकरात लवकर बरे होवो अशी मी प्रार्थना करतो.
— Amit Shah (@AmitShah) October 8, 2022
ರಸ್ತೆ ಅಪಘಾತ ಹೃದಯವಿದ್ರಾವಕವಾಗಿದೆ, ಈ ಭೀಕರ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ನಷ್ಟದಲ್ಲಿ ಸಾಗುತ್ತಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆ ನಡುವೆ ಲಾಭದ ಹಳಿ ಏರಿದ `ನಮ್ಮ ಮೆಟ್ರೋ’
ನಾಸಿಕ್‍ನಲ್ಲಿ ನಡೆದ ಘಟನೆ ದುರದೃಷ್ಟಕರವಾಗಿದ್ದು, 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡುವುದು ನಮ್ಮ ಆದ್ಯತೆ. ಆಸ್ಪತ್ರೆಯಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಮೃತರ ಸಂಬಂಧಿಕರಿಗೆ 5 ಲಕ್ಷ ರೂ ಪರಿಹಾರ ನೀಡಲಾಗುವುದು ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ.