ಭೋಪಾಲ್: ವೇಗವಾಗಿ ಬಂದ ವ್ಯಾನ್ (Van), ಬೈಕ್‌ಗೆ ಡಿಕ್ಕಿಯಾಗಿ ಬಾವಿಗೆ ಬಿದ್ದ ಪರಿಣಾಮ 11 ಮಂದಿ ಸಾವಿಗೀಡಾದ ಘಟನೆ ಮಧ್ಯಪ್ರದೇಶದ (Madhya Pradesh) ಮಂದ್ಸೌರ್ ಜಿಲ್ಲೆಯಲ್ಲಿ ನಡೆದಿದೆ.
ಅಪಘಾತದಲ್ಲಿ (Accident) ವ್ಯಾನ್‌ನಲ್ಲಿದ್ದ 9 ಮಂದಿ, ಬೈಕ್ (Bike) ಸವಾರ ಹಾಗೂ ರಕ್ಷಣೆಗಾಗಿ ಬಾವಿಗೆ ಇಳಿದ ಸ್ಥಳೀಯರೊಬ್ಬರು ಸೇರಿದಂತೆ 11 ಮಂದಿ ಸಾವಿಗೀಡಾಗಿದ್ದಾರೆ. ವ್ಯಾನ್‌ನಲ್ಲಿ 13 ಜನರು ಪ್ರಯಾಣಿಸುತ್ತಿದ್ದರು. ವೇಗವಾಗಿ ಬಂದ ವ್ಯಾನ್ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಈ ಭೀಕರ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವ್ಯಾನ್‌ನಲ್ಲಿದ್ದ ನಾಲ್ವರನ್ನು ರಕ್ಷಿಸಲಾಗಿದೆ. ಶವಗಳನ್ನು ಬಾವಿಯಿಂದ ಮೇಲೆತ್ತಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ನಾರಾಯಣಗಢ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.