ಶಿವಮೊಗ್ಗ: ಹೊಳೆಹೊನ್ನೂರಲ್ಲಿ (Holehonnuru) ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ (Dog) ಕಡಿದಿದೆ. ಎಲ್ಲರಿಗೂ ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೀದಿ ನಾಯಿಗಳನ್ನು ನಿಯಂತ್ರಿದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ಪಟ್ಟಣದ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ನಗರದ ಬಹುತೇಕ ವಾರ್ಡ್‍ಗಳಲ್ಲಿ ಒಟ್ಟಾರೆಯಾಗಿ ನೂರಾರು ಬೀದಿನಾಯಿಗಳಿವೆ. ಇದರಿಂದ ಹಲವು ದಿನಗಳಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಇದನ್ನೂ ಓದಿ: ಪ್ರವಚನ ಮುಗಿಸಿ ಹೊರಟವರ ಮೇಲೆ ಬೀದಿ ನಾಯಿಗಳ ದಾಳಿ – 10ಕ್ಕೂ ಹೆಚ್ಚು ಮಂದಿಗೆ ಗಾಯ
ಈ ಕುರಿತಂತೆ ಮಾತನಾಡಿದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಆರ್.ಉಮೇಶ್, ಪಟ್ಟಣ ಪಂಚಾಯಿತಿಯಲ್ಲಿ ಜನಪ್ರತಿನಿಧಿಗಳಿಲ್ಲದೆ ಬರೀ ಅಧಿಕಾರಿಗಳ ಆಡಳಿತವಿದೆ. ಅಧಿಕಾರಿಗಳು ಜನರ ಸಮಸ್ಯೆ ಆಲಿಸದೆ ಅವರ ಕೆಲಸವನ್ನಷ್ಟೇ ಮಾಡುತ್ತಿದ್ದಾರೆ ಎಂದು ದೂರಿದರು. ಕುಡಿಯುವ ನೀರು, ಬೀದಿ ನಾಯಿಗಳ ಉಪಟಳ ಸೇರಿದಂತೆ ಇನ್ನು ಹತ್ತು ಹಲವಾರು ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ, ಅದಕ್ಕೆ ಸ್ಪಂದಿಸದೆ ಬಂದ ಪುಟ್ಟ ಹೋದಪುಟ್ಟ ಅಂದುಕೊಂಡು ಅಧಿಕಾರಿಗಳು ಕೆಲಸ ಮಾಡಿ ಮನೆಗೆ ಹೋಗುತ್ತಾರೆ.್ಟವರೆಲ್ಲ ನಮ್ಮ ಪಟ್ಟಣ ಪಂಚಾಯತ್ ಬಿಟ್ಟು ಹೋಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂದು ಒಂದೇ ದಿನ ಇಷ್ಟೊಂದು ಮಂದಿಗೆ ಬೀದಿ ನಾಯಿಗಳು ಕಡಿದಿದೆ. ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳು ಈ ಬೀದಿ ನಾಯಿಗಳನ್ನು ಸೆರೆ ಹಿಡಿಸಿ, ಅವುಗಳಿಗೆ ದೂರದಲ್ಲಿ ಶೆಡ್ ಮಾಡಿ ಇರಿಸಬೇಕು. ಸಾರ್ವಜನಿಕರ ಜೀವಕ್ಕೆ ಮಾರಕವಾಗಿರುವ ಬೀದಿ ನಾಯಿಗಳಿಂದ ಮುಕ್ತಿ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಆಟವಾಡುತ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ – 10 ಮಂದಿಗೆ ಗಂಭೀರ ಗಾಯ

