ರಾಯಪುರ: ಎಸ್‌ಯುವಿ (SUV) ಕಾರು ಟ್ರಕ್‌ವೊಂದಕ್ಕೆ (Truck) ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿದಂತೆ 11 ಜನ ಸಾವನ್ನಪ್ಪಿರುವ ಘಟನೆ ಛತ್ತಿಸ್‌ಗಢದ (Chattisgarh) ಬಲೋದ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಮೃತರು ಧಮತರಿ ಜಿಲ್ಲೆಯ ಸೋರಂ-ಭಟ್‌ಗಾಂವ್ ಗ್ರಾಮದ ನಿವಾಸಿಗಳಾಗಿದ್ದು, ಮದುವೆ ನಿಮಿತ್ತ ಕಂಕೇರ್ ಜಿಲ್ಲೆಯ ಮರ್ಕಟೋಲಾ ಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಜಾಗ್ತಾರಾ ಗ್ರಾಮದ ರಾಷ್ಟ್ರೀಯ ಹೆದ್ದಾರಿ-30ರಲ್ಲಿ ಕಾರು ಟ್ರಕ್‌ವೊಂದಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ ಎಂದು ಪುರೂರ್ ಪೊಲೀಸ್ ಠಾಣಾಧಿಕಾರಿ ಅರುಣ್ ಕುಮಾರ್ ಸಾಹು ತಿಳಿಸಿದ್ದಾರೆ. ಇದನ್ನೂ ಓದಿ: 12ನೇ ತರಗತಿ ಓದಿ ದಿನಕ್ಕೆ 10 ಕೋಟಿ ಸಂಪಾದನೆ – ಸೈಬರ್ ಕಿರಾತಕರು ಅಂದರ್
Advertisement
Advertisement
ಘಟನೆ ಬಳಿಕ ಟ್ರಕ್ ಚಾಲಕ ವಾಹನವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಅಪಘಾತದಲ್ಲಿ ಎಸ್‌ಯುವಿ ಕಾರ್‌ನಲ್ಲಿದ್ದ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಮಗು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: ಕೇಂದ್ರದ ಮಾಜಿ ನೌಕರನ ಮನೆ ಮೇಲೆ ಸಿಬಿಐ ದಾಳಿ – 20 ಕೋಟಿ ವಶ
Advertisement
Advertisement
ವಾಹನ ಬಿಟ್ಟು ಪರಾರಿಯಾಗಿರುವ ಟ್ರಕ್ ಚಾಲಕನ ಪತ್ತೆಗಾಗಿ ಶೋಧಕಾರ್ಯ ನಡೆಯುತ್ತಿದೆ. ಈ ಘಟನೆಗೆ ಛತ್ತಿಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ (Bhupesh Baghel) ಸಂತಾಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ಅರ್ಚಕ ನೇಣುಬಿಗಿದು ಆತ್ಮಹತ್ಯೆ – ಸಾಯುವ ಮೊದಲು ಫೇಸ್‌ಬುಕ್ ಲೈವ್