ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ರಾಜಧಾನಿ ದೆಹಲಿಯಲ್ಲಿ ಸೊಂಕಿತರ ಸಂಖ್ಯೆ ಏರುತ್ತಲೇ ಇದೆ. ಈಗ ಜಮಾ ಮಸೀದಿಯ ಜನನಿಬಿಡ ಚುಡಿವಾಲನ್ ಪ್ರದೇಶದಲ್ಲಿ ಒಂದೇ ಕುಟುಂಬದ 11 ಮಂದಿಗೆ ಕೊರೊನಾ ತಗುಲಿದ್ದು, ಇಡೀ ಪ್ರದೇಶವನ್ನೇ ಸೀಲ್‍ಡೌನ್ ಮಾಡಲಾಗಿದೆ.
Advertisement
ಒಂದೇ ಕುಟುಂಬದ 11 ಮಂದಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಈ ಸೋಂಕಿತರಲ್ಲಿ 2 ತಿಂಗಳು ಮಗು ಹಾಗೂ 6 ವರ್ಷದ ಬಾಲಕನೂ ಸೇರಿದ್ದಾನೆ. ಹೀಗಾಗಿ ಇಡೀ ಚುಡಿವಾಲನ್ ಪ್ರದೇಶವನ್ನು ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಸಂಪೂರ್ಣ ಸೀಲ್‍ಡೌನ್ ಮಾಡಿದ್ದಾರೆ ಎಂದು ದೆಹಲಿಯ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಮಾಹಿತಿ ನೀಡಿದ್ದಾರೆ.
Advertisement
Advertisement
ಈ ಕುಟುಂಬದ ಒಬ್ಬರು ವಿದೇಶದಿಂದ ಮರಳಿದ್ದು, ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು. ಹೀಗಾಗಿ ಅವರನ್ನು ಮ್ಯಾಕ್ಸ್ ಆಸ್ಪತ್ರೆಯಲ್ಲಿ ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ. ಅಲ್ಲದೇ ಕುಟುಂಬದ 18 ಮಂದಿಯನ್ನು ಧೈರ್ಯಗಂಜ್‍ನ ಖಾಸಗಿ ಲ್ಯಾಬ್‍ನಲ್ಲಿ ಕೊರೊನಾ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈಗ ಇದರಲ್ಲಿ 11 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
Advertisement
ಈ ಹಿನ್ನೆಲೆ ಈ ಸೋಂಕಿತ ಕುಟುಂಬದೊಂದಿಗೆ ಸಂಪರ್ಕಕ್ಕೆ ಹೋಂದಿದ್ದ ಜನರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದೇವೆ. ಸಂಪರ್ಕಿತರು ಸಿಕ್ಕ ಬಳಿಕ ಅವರನ್ನು ಪರೀಕ್ಷೆಗೆ ಒಳಪಡಿಸಿ, ಕ್ವಾರಂಟೈನ್‍ನಲ್ಲಿ ಇರಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ. ಸದ್ಯ ದೆಹಲಿಯಲ್ಲಿ 90 ಪ್ರದೇಶಗಳನ್ನು ಕೊರೊನಾ ಹಾಟ್‍ಸ್ಪಾಟ್ ಪ್ರದೇಶಗಳು ಎಂದು ಗುರುತಿಸಲಾಗಿದೆ.