ಹೈದರಾಬಾದ್: ಹನ್ನೊಂದು ತಿಂಗಳ ಹೆಣ್ಣು ಶಿಶು ಆಕಸ್ಮಿಕವಾಗಿ ಇಯರ್ ಫೋನ್ ನುಂಗಿ ಬಳಿಕ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಪೂರ್ವ ಗೋದಾವರಿ ಜಿಲ್ಲೆಯ ಪರ್ಸಲಾಪುದಿ ಗ್ರಾಮದಲ್ಲಿ ಈ ಘಟನೆ ನಡೆದೆ. ಶಸ್ತ್ರ ಚಿಕಿತ್ಸೆಯ ಮೂಲಕ ಇಯರ್ ಫೋನನ್ನು ದೇಹದಿಂದ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ವೈದ್ಯರು ತಿಳಿಸಿದ್ದಾರೆ.
Advertisement
Advertisement
ಆಗಿದ್ದು ಏನು?
ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಇಯರ್ ಫೋನ್ ನುಂಗಿದ ಬಳಿಕ ಮಗು ಒಂದೇ ಸಮನೆ ಅಳುತ್ತಿದ್ದಳು. ಏನು ಮಾಡಬೇಕೆಂದು ತೋಚದ ಹೆತ್ತವರು ಮಗಳನ್ನು ಅಮಲಾಪುರಂ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಗಂಟಲಲ್ಲಿ ಸೆರಲ್ಯಾಕ್ ಸಿಲುಕಿ 3 ತಿಂಗಳ ಮಗು ಸಾವು
Advertisement
ಪ್ರಾಥಮಿಕ ಪರೀಕ್ಷೆಯ ವೇಳೆ ವೈದ್ಯರು ದೇಹದ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ. ಆದರೂ ಮಗು ಆಳುತ್ತಿದ್ದ ಕಾರಣ ಎಕ್ಸ್-ರೇ ಮಾಡಿಸಿದ್ದಾರೆ. ಈ ವೇಳೆ ಮೊಬೈಲ್ ಇಯರ್ ಫೋನ್ ಇರುವುದು ಪತ್ತೆಯಾಗಿದೆ.
Advertisement
ಕೂಡಲೇ ನಮ್ಮ ತಂಡ ಶಸ್ತ್ರಚಿಕಿತ್ಸೆ ನಡೆಸಿ ದೇಹದಿಂದ ಇಯರ್ ಫೋನ್ ಹೊರ ತೆಗೆದಿದ್ದೇವೆ. ಈಗ ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ಶಸ್ತ್ರ ಚಿಕಿತ್ಸೆ ನಡೆಸಿದ ಅಮಲಾಪುರಂ ಆಸ್ಪತ್ರೆಯ ವೈದ್ಯ ಚಕ್ರವರ್ತಿ ತಿಳಿಸಿದ್ದಾರೆ. ಇದನ್ನೂ ಓದಿ: ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಪುಟ್ಟ ಕಂದಮ್ಮ ದುರ್ಮರಣ!