ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡು 11 ಅಂಗಡಿಗಳು ಸುಟ್ಟು ಭಸ್ಮವಾಗಿವೆ.
ಮಾನ್ವಿ ಪಟ್ಟಣದ ಪಂಪಾ ಹೌಸಿಂಗ್ ಕಾಲೋನಿಯಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಒಂದು ಅಂಗಡಿಗೆ ಹತ್ತಿಕೊಂಡ ಬೆಂಕಿ ಪಕ್ಕದ ಇನ್ನಿತರ ಅಂಗಡಿಗಳಿಗೂ ವ್ಯಾಪಿಸಿದೆ. ಮೊಬೈಲ್ ಅಂಗಡಿ, ಹಣ್ಣಿನ ಅಂಗಡಿಗಳು ಸೇರಿದಂತೆ 11 ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ.
- Advertisement
ಶಾಟ್ ಸರ್ಕ್ಯೂಟ್‍ನಿಂದ ಬೆಂಕಿ ಹತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ.
- Advertisement