DistrictsKarnatakaLatestRaichur

ಆಕಸ್ಮಿಕ ಬೆಂಕಿ ಅನಾಹುತ: ಹೊತ್ತಿ ಉರಿದ 11 ಅಂಗಡಿಗಳು

ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡು 11 ಅಂಗಡಿಗಳು ಸುಟ್ಟು ಭಸ್ಮವಾಗಿವೆ.

ಮಾನ್ವಿ ಪಟ್ಟಣದ ಪಂಪಾ ಹೌಸಿಂಗ್ ಕಾಲೋನಿಯಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಒಂದು ಅಂಗಡಿಗೆ ಹತ್ತಿಕೊಂಡ ಬೆಂಕಿ ಪಕ್ಕದ ಇನ್ನಿತರ ಅಂಗಡಿಗಳಿಗೂ ವ್ಯಾಪಿಸಿದೆ. ಮೊಬೈಲ್ ಅಂಗಡಿ, ಹಣ್ಣಿನ ಅಂಗಡಿಗಳು ಸೇರಿದಂತೆ 11 ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ.

ಶಾಟ್ ಸರ್ಕ್ಯೂಟ್‍ನಿಂದ ಬೆಂಕಿ ಹತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ.

 

Leave a Reply

Your email address will not be published. Required fields are marked *

Back to top button