ಮೈಸೂರು: ಟಿ. ನರಸೀಪುರ ತಾಲೂಕಿನ ಹೊರಹಳ್ಳಿಯಲ್ಲಿ ಚಿರತೆ (Leopard) ದಾಳಿ ಮಾಡಿ 11 ವರ್ಷದ ಬಾಲಕನನ್ನು (Boy) ಬಲಿ ಪಡೆದು, ಆತನ ದೇಹವನ್ನು ಹೊತ್ತೊಯ್ದ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ಹೊರಳಹಳ್ಳಿ ಗ್ರಾಮದ ಜಯಂತ್ (11) ಮೃತ ಬಾಲಕ. ಜಯಂತ್ ಶವಕ್ಕಾಗಿ ರಾತ್ರಿಯೆಲ್ಲಾ ಗ್ರಾಮಸ್ಥರು ಹುಡುಕಾಟ ನಡೆಸಿದ್ದರು. ಆದರೆ ಬಾಲಕನ ಶವ ಪತ್ತೆ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೊರಳಹಳ್ಳಿ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಘಟನೆಗೆ ಸಂಬಂಧಿಸಿ ಅರಣ್ಯ ಇಲಾಖೆ ಅಧಿಕಾರಿಗಳು, ಶಾಸಕರು, ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಮೃತ ವ್ಯಕ್ತಿಯ ಬಾಲಕನ ಶವ ಪತ್ತೆ ಹಚ್ಚುವುದಾಗಿ ಭರವಸೆ ನೀಡಿದ್ದರು.
Advertisement
Advertisement
ಅದರಂತೆ ಭಾನವಾರ ಬೆಳಗ್ಗೆ ಮೃತ ಬಾಲಕ ಜಯಂತ್ನ ದೇಹವು ಘಟನಾ ಸ್ಥಳದಿಂದ 1 ಕಿ.ಮೀ ದೂರದಲ್ಲಿ ಪತ್ತೆಯಾಗಿದೆ. ಬಾಲಕನ ದೇಹವನ್ನು ಚಿರತೆ ತಿಂದು ಹಾಕಿದೆ ಸ್ಥಳಕ್ಕೆ ಅರಣ್ಯಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Advertisement
ಟಿ. ನರಸೀಪುರ ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಚಿರತೆ ಹಾವಳಿ ಹಿನ್ನೆಲೆಯಲ್ಲಿ ಸರ್ಕಾರ, ಸಚಿವರು, ಅಧಿಕಾರಿಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ. ಮಾಜಿ ತಾಪಂ ಸದಸ್ಯ ರಮೇಶ್ ಮಾತನಾಡಿ, ಸರ್ಕಾರಕ್ಕೆ ಮಾನ, ಮರ್ಯಾದೆ ಇಲ್ಲ. ನರಸೀಪುರದಲ್ಲಿ ದಿನದಿಂದ ದಿನಕ್ಕೆ ಚಿರತೆಗಳು ಮನುಷ್ಯರು, ಸಾಕು ಪ್ರಾಣಿಗಳನ್ನು ಬಲಿ ಪಡೆಯುತ್ತಲೇ ಇದೆ. ಸೌಜನ್ಯಕ್ಕಾದರೂ ಉಸ್ತುವಾರಿ ಸಚಿವರು, ಅರಣ್ಯ ಇಲಾಖೆ ಸಚಿವರು ಭೇಟಿ ನೀಡಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ರಾಜ್ಯದಲ್ಲಿ ಮದರಾಸಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತೇನೆ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ
Advertisement
ಚಿರತೆ ದಾಳಿಯಿಂದ ದಿನನಿತ್ಯ ಸಾಯುತ್ತಿರುವ ಬಡ ಜೀವಗಳಿಗೆ ಬೆಲೆಯಿಲ್ಲವೇ? ಸರ್ಕಾರ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ದಾಳಿ ತಪ್ಪಿಸಲು ಯಾವ ಕ್ರಮ ಕೈಗೊಂಡಿದ್ದೀರಾ? ನಿಮ್ಮ ಸುಳ್ಳು ಭರವಸೆಗಳು, ಪರಿಹಾರಗಳು ನಮಗೆ ಬೇಡ. ಚಿರತೆಗಳನ್ನು ಕೊಂದು ಹಾಕಿಯಾದರು ತಾಲೂಕಿನ ಜನತೆ ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಟಿ ಮಾಡಿ. ಇಲ್ಲ ಜನತೆಯೇ ಅಧಿಕಾರಿಗಳು, ಸರ್ಕಾರ ಮತ್ತು ಆಡಳಿತದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಅಮೆರಿಕ ಮಿಲಿಟರಿ ಪಡೆಯಿಂದ ವೈಮಾನಿಕ ದಾಳಿ – 30 ಉಗ್ರರ ಹತ್ಯೆ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k