ಬೆಂಗಳೂರು: ಅಸಭ್ಯ ವರ್ತನೆ ತೋರಿದ ವ್ಯಕ್ತಿ ಬಗ್ಗೆ ಪೋಷಕರಿಗೆ ತಿಳಿಸಿದ್ದಕ್ಕೇ 11 ವರ್ಷದ ಬಾಲಕಿಯನ್ನು ಚಾಕು ಇರಿದು ಕೊಲೆ ಮಾಡಿರುವ ಘಟನೆ ನೆಲಮಂಗಲ ಸಮೀಪದ ಮಾದನಾಯಕನಹಳ್ಳಿಯ ಜಿಂದಾಲ್ ಕ್ವಾಟ್ರಸ್‌ನಲ್ಲಿ ನಡೆದಿದೆ.
ತನ್ನ ಮುಂದೆ ಹರಿಯಾಣ ಮೂಲದ ನಂದ ಕಿಶೋರ್ ಅಸಭ್ಯ ವರ್ತನೆ ಮಾಡುತ್ತಿರುವುದನ್ನು ಬಾಲಕಿ ಪೋಷಕರಿಗೆ ತಿಳಿಸಿದ್ದಾಳೆ. ಇದರಿಂದ ಕೋಪಗೊಂಡ ನಂದ ಕಿಶೋರ್ ಉತ್ತರಾಖಂಡ್ ಮೂಲದ ಬಾಲಕಿಗೆ ಚಾಕುವಿಂದ ಇರಿದು ಕೊಲೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಂದ ಕಿಶೋರ್‌ನನ್ನು ತಕ್ಷಣ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ನದಿ, ಕೆರೆಗಳಲ್ಲಿ ಸ್ನಾನ ಮಾಡೋ ಮುನ್ನ ಹುಷಾರ್ – ವಿದೇಶದಲ್ಲಿ ಪತ್ತೆಯಾಗಿದೆ ಮೆದುಳು ತಿನ್ನುವ ಡೆಡ್ಲಿ ವೈರಸ್
ಮೃತ ಬಾಲಕಿ ತಂದೆ ಹಾಗೂ ಮೃತ ಆರೋಪಿ ಇಬ್ಬರೂ ಜಿಂದಾಲ್ ಕಂಪನಿಯ ನೌಕರರಾಗಿದ್ದು, ಬಾಲಕಿಯ ಆರೋಪದಿಂದ ಕ್ವಾಟ್ರಸ್ ಖಾಲಿ ಮಾಡಲು ಕಂಪನಿಯಿಂದ ನೋಟಿಸ್ ಜಾರಿ ಮಾಡಲಾಗಿತ್ತು. ಇದರಿಂದಾಗಿಯೇ ನಂದಕಿಶೋರ್ ಅಪ್ರಾಪ್ತೆಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಾಲ್ಕು ಗೋಡೆ ಮಧ್ಯೆ ಜಗಳವಾಡಿರೋದು, ಬೀದಿಗೆ ತರಬಾರದು: ಅನಿರುದ್ಧ್
ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿಯ ಪೊಲೀಸ್ ಅಧಿಕಾರಿ ಮಂಜುನಾಥ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡೆ ಅವರೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತನಿಖೆ ಮುಂದುವರಿದಿದೆ.