– ಅನ್ಲಾಕ್ ಜಿಲ್ಲೆಗಳಲ್ಲಿ ಷರತ್ತುಗಳು ಅನ್ವಯ
ಬೆಂಗಳೂರು: ಕೊರೊನಾ ಸೋಂಕು ಪ್ರಮಾಣ ಕಡಿಮೆ ಇರುವ 19 ಜಿಲ್ಲೆಗಳನ್ನು ಅನ್ಲಾಕ್ ಮಾಡಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅನ್ಲಾಕ್ ಆಗಿರುವ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜೊತೆಯಲ್ಲಿ ವೀಕೆಂಡ್ ಲಾಕ್ಡೌನ್ ಇರಲಿದೆ.
11 ಜಿಲ್ಲೆಗಳು ಲಾಕ್: ರಾಜ್ಯದಲ್ಲಿ ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ. ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ.
Advertisement
Advertisement
ಅನ್ಲಾಕ್ ಜಿಲ್ಲೆಗಳಲ್ಲಿ ಏನು ಸಡಿಲಿಕೆ:
ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಈ ಕೆಳಕಂಡ ಸಡಿಲಿಕೆಗಳೊಂದಿಗೆ ದಿನಾಂಕ: 14-06-2021 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 21-06-2021 ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
Advertisement
Advertisement
1. ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ.
2. ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
3. ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿಮಾಣ ಚಟುವಟಿಕೆ ಸಂಬಂದಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನಿಡಲಾಗಿದೆ.
4. ಪಾರ್ಕ್ ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
5. ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.
6. ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.
7. ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
8. ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.