– ಕರ್ನಾಟಕದಲ್ಲಿ 4 ಹೆಲ್ಪ್‌ಲೈನ್ ಓಪನ್
ಚಿಕ್ಕಮಗಳೂರು: ಶುಕ್ರವಾರ ಸಂಜೆ ನಡೆದ ಒಡಿಶಾ ರೈಲು ದುರಂತ (Odisha Train Tragedy) ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ (Karnataka) 110 ಪ್ರಯಾಣಿಕರು ರೈಲಿನಲ್ಲಿ ಪ್ರಯಾಣಿಸುತ್ತಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
Advertisement
ಚೆನ್ನೈ-ಕೊರೊಮಂಡಲ್ ಎಕ್ಸ್‌ಪ್ರೆಸ್ ರೈಲು, ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ರೈಲು ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತವಾಗಿದೆ. ಬಾಲಾಸೋರ್ (Balasore) ಜಿಲ್ಲೆಯ ಬಹನಗ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದ್ದು, 12841 ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾದ ರಭಸಕ್ಕೆ ಪ್ರಯಾಣಿಕರಿದ್ದ ರೈಲಿನ ಹಲವು ಬೋಗಿಗಳು ಹಳಿ ತಪ್ಪಿ, ಭೀಕರ ಅಪಘಾತದಲ್ಲಿ ಹಲವರು ಮೃತಪಟ್ಟಿದ್ದಾರೆ. ಈ ದುರಂತ ನಡೆದ ಸಂದರ್ಭದಲ್ಲಿ ಕರ್ನಾಟಕದ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಳಸದ (Kalasa) 110 ಮಂದಿ ಸುಮೇದ್ ಸಿಖರ್ಜಿ ಯಾತ್ರೆಗೆಂದು ಹೊರಟಿದ್ದು, ಅಪಘಾತದಲ್ಲಿ 110 ಮಂದಿಯೂ ಬಚಾವ್ ಆಗಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತ ಹೇಗಾಯ್ತು..? ಘಟನೆಗೆ ಕಾರಣ ಏನು..?
Advertisement
Advertisement
ಕಳಸ, ಸಂಸೆ, ಹೊರನಾಡು ಸುತ್ತಮುತ್ತಲಿನ ಜೈನ ಸಮುದಾಯದ 110 ಮಂದಿ 24ನೇ ಜೈನ ತೀರ್ಥಂಕರರು ಮೋಕ್ಷ ಹೊಂದಿದ್ದ ಪುಣ್ಯ ಕ್ಷೇತ್ರಕ್ಕೆ ತೆರಳುತ್ತಿದ್ದರು. ಇವರೆಲ್ಲರೂ ಬೆಂಗಳೂರಿನಿಂದ (Bengaluru) ಶುಕ್ರವಾರ 11:30ಕ್ಕೆ ಹೊರಟಿದ್ದು, ರೈಲಿನ ಎಸ್3, ಎಸ್4 ಬೋಗಿಯಲ್ಲಿ ಪ್ರಯಾಣ ಮಾಡುತ್ತಿದ್ದರು. ಸದ್ಯ ಅಪಘಾತದಿಂದ ಎಲ್ಲರೂ ಸೇಫ್ ಆಗಿದ್ದಾರೆ. ಇದನ್ನೂ ಓದಿ: Odisha Train Accident; ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆ – 233 ಮಂದಿ ಬಲಿ, 900 ಮಂದಿಗೆ ಗಾಯ
Advertisement
ಅಪಘಾತದ ನಂತರ ಕರ್ನಾಟಕದಲ್ಲಿ 4 ಹೆಲ್ಪ್‌ಲೈನ್‌ಗಳನ್ನು (Helpline) ಓಪನ್ ಮಾಡಿದ್ದು, ಈವರೆಗೂ ಒಂದೂ ಕರೆ ಬಂದಿಲ್ಲ. ರೈಲಿನ ಜನರಲ್ ಬೋಗಿಗಳಿಗೆ ಡ್ಯಾಮೇಜ್ ಆಗಿದೆ ಎನ್ನುವ ಮಾಹಿತಿ ದೊರೆತಿದ್ದು, ಆ ಬೋಗಿಗಳಲ್ಲಿ ಕೆಲಸ ಅರಸಿ ಬಂದವರೇ ಹೆಚ್ಚಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಹಳಿ ತಪ್ಪಿದ ರೈಲಿಗೆ ಯಶವಂತಪುರದಿಂದ ಸಾಗುತ್ತಿದ್ದ ರೈಲು ಡಿಕ್ಕಿ – 50 ಸಾವು