ಚಿಕ್ಕಬಳ್ಳಾಪುರ: ಜಿಲ್ಲೆಯ ಬಿಜಿಎಸ್ ವಿದ್ಯಾರ್ಥಿನಿಲಯದಲ್ಲಿ ಹಳಸಿದ ಆಹಾರ ಸೇವನೆ ಮಾಡಿದ ಪರಿಣಾಮ 110 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಅಂತ ಚಿಕ್ಕಬಳ್ಳಾಪುರ ಡಿಎಚ್‍ಓ ರವಿಶಂಕರ್ ಸ್ಪಷ್ಟಪಡಿಸಿದ್ದಾರೆ.
ಎರಡು ದಿನಗಳಿಂದ ಪದೇ ಪದೇ ಅಗಲಗುರ್ಕಿ ಗ್ರಾಮದ ಬಳಿಯ ಬಿಜಿಎಸ್ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ವಾಂತಿ-ಭೇದಿಯಿಂದ ಚಿಕ್ಕಬಳ್ಳಾಪುರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದರು. ಈ ಬಗ್ಗೆ ಆಡಳಿತ ಮಂಡಳಿ ವೈರಲ್ ಫೀವರ್ ಅಂತ ಹೇಳಿ ಏನೂ ಆಗಿಲ್ಲ ಅನ್ನೋ ರೀತಿ ವರ್ತನೆ ಮಾಡಿತ್ತು. ಆದ್ರೆ ಸದ್ಯ ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಇಲಾಖಾಧಿಕಾರಿಗಳು ಘಟನೆಯ ಮಾಹಿತಿ ಪಡೆದಿದ್ದು ಹಳಸಿದ ಆಹಾರ ಸೇವನೆಯೇ ವಿದ್ಯಾರ್ಥಿಗಳ ಅಸ್ವಸ್ಥತೆಗೆ ಕಾರಣ ಅಂತ ತಿಳಿದುಬಂದಿದೆ. ಇದನ್ನೂ ಓದಿ: ಬಿಜಿಎಸ್ ವಿದ್ಯಾರ್ಥಿನಿಲಯದಲ್ಲಿ ಫುಡ್ ಪಾಯಿಸನ್ ಶಂಕೆ – 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ
Advertisement
Advertisement
110 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಪರಿಸ್ಥಿತಿ ಇಲ್ಲ. ಇನ್ನೂ ಬಿಜಿಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಕೆಲ ವಿದ್ಯಾರ್ಥಿಗಳನ್ನ ಈಗಾಗಲೇ ಮನೆಗೆ ಕಳುಹಿಸಿದ್ದು, ಕೆಲ ವಿದ್ಯಾರ್ಥಿಗಳಿಗೆ ಪೋಷಕರೇ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ ಅಂತ ಮಾಹಿತಿ ಲಭಿಸಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv