– ಬೆಂಗಳೂರಲ್ಲಿ 2,191, ಪಾಸಿಟಿವಿಟಿ ರೇಟ್ ಶೇ.3.34
ಬೆಂಗಳೂರು: ರಾಜ್ಯದಲ್ಲಿ ಇಂದು 11,042 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 15,721 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಪಾಸಿಟಿವಿಟಿ ರೇಟ್ ಮತ್ತಷ್ಟು ಕಡಿಮೆಯಾಗಿದ್ದು, ಶೇ.6.58ಕ್ಕೆ ಇಳಿಕೆಯಾಗಿದೆ. ಇಂದು ಕೊರೊನಾಗೆ 194 ಜನ ಬಲಿಯಾಗಿದ್ದು, ಮರಣ ಪ್ರಮಾಣ ಶೇ.1.75ರಷ್ಟಿದೆ.
Advertisement
ಸದ್ಯ ರಾಜ್ಯದಲ್ಲಿ 2,10,652 ಸಕ್ರಿಯ ಪ್ರಕರಣಗಳಿವೆ. ಇಂದು 15,721 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇದುವರೆಗೂ 27,39,290 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: 11 ಜಿಲ್ಲೆಗಳು ಲಾಕ್ – ನೈಟ್ ಕರ್ಫ್ಯೂ ಜೊತೆಯಲ್ಲಿ ವೀಕೆಂಡ್ ಲಾಕ್ಡೌನ್
Advertisement
Advertisement
ಇಂದು ಒಟ್ಟು 1,67,731 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 65,580 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, 2,191 ಜನಕ್ಕೆ ಸೋಂಕು ತಗುಲಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 95,423ಕ್ಕೆ ಇಳಿಕೆಯಾಗಿದ್ದು, 47 ಜನ ಸೋಂಕಿಗೆ ಬಲಿಯಾಗಿದ್ದಾರೆ. ಇದನ್ನೂ ಓದಿ: ಜೂನ್ 14ರಿಂದ ರಾಜ್ಯದಲ್ಲಿ ಅನ್ಲಾಕ್ ಪ್ರಕ್ರಿಯೆ – 11 ಜಿಲ್ಲೆಗಳು ಇನ್ನೊಂದು ವಾರ ಲಾಕ್
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 72, ಬಳ್ಳಾರಿ 293, ಬೆಳಗಾವಿ 439, ಬೆಂಗಳೂರು ಗ್ರಾಮಾಂತರ 264, ಬೆಂಗಳೂರು ನಗರ 2,191, ಬೀದರ್ 20, ಚಾಮರಾಜನಗರ 274, ಚಿಕ್ಕಬಳ್ಳಾಪುರ 280, ಚಿಕ್ಕಮಗಳೂರು 397, ಚಿತ್ರದುರ್ಗ 349, ದಕ್ಷಿಣ ಕನ್ನಡ 580, ದಾವಣಗೆರೆ 313, ಧಾರವಾಡ 261, ಗದಗ 90, ಹಾಸನ 776, ಹಾವೇರಿ 67, ಕಲಬುರಗಿ 58, ಕೊಡಗು 279, ಕೋಲಾರ 247, ಕೊಪ್ಪಳ 161, ಮಂಡ್ಯ 448, ಮೈಸೂರು 1,011, ರಾಯಚೂರು 115, ರಾಮನಗರ 59, ಶಿವಮೊಗ್ಗ 521, ತುಮಕೂರು 571, ಉಡುಪಿ 291, ಉತ್ತರ ಕನ್ನಡ 426, ವಿಜಯಪುರ 174 ಮತ್ತು ಯಾದಗಿರಿಯಲ್ಲಿ 15 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.