ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡುಬಂದಿದೆ. ಇಂದು ಒಟ್ಟು 1,108 ಪಾಸಿಟಿವ್ ಕೇಸ್ ಪತ್ತೆಯಾಗಿದೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,680ಕ್ಕೆ ತಲುಪಿದೆ. 9 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲೂ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರು ನಗರದಲ್ಲಿ ಇಂದು 993 ಪ್ರಕರಣ ಪತ್ತೆಯಾಗಿದ್ದು, 879 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 6,992ಕ್ಕೆ ತಲುಪಿದೆ.
Advertisement
Advertisement
ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 4.61ಕ್ಕೆ ತಲುಪಿದೆ. ಈವರೆಗೆ ಒಟ್ಟು 40,089 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ 997 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ನೀವು ಬರಬೇಡಿ.. ನಿಮ್ಮ ಮನೆಯ ಪುರುಷರನ್ನು ಕೆಲಸಕ್ಕೆ ಕಳಿಸಿ: ಮಹಿಳಾ ಉದ್ಯೋಗಿಗಳಿಗೆ ತಾಲಿಬಾನ್ ಸೂಚನೆ
Advertisement
Advertisement
ಈವರೆಗೆ ರಾಜ್ಯದಲ್ಲಿ ಒಟ್ಟು 39,87,428 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,39,617 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 16,256 ಸ್ಯಾಂಪಲ್ (ಆರ್ಟಿ ಪಿಸಿಆರ್ 12653 + 3,603 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 0, ಬಳ್ಳಾರಿ 11, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 993, ಬೀದರ್ 6, ಚಾಮರಾಜನಗರ 4, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 3, ಚಿತ್ರದುರ್ಗ 1, ದಕ್ಷಿಣ ಕನ್ನಡ 15, ದಾವಣಗೆರೆ 0, ಧಾರವಾಡ 3, ಹಾಸನ 3, ಗದಗ 0, ಹಾವೇರಿ 2, ಕಲಬುರಗಿ 7, ಕೋಲಾರ 12, ಕೊಪ್ಪಳ 0, ಕೊಡಗು 0, ಮಂಡ್ಯ 6, ಮೈಸೂರು 25, ರಾಯಚೂರು 0, ರಾಮನಗರ 3, ಶಿವಮೊಗ್ಗ 2, ತುಮಕೂರು 1, ಉಡುಪಿ 0, ಉತ್ತರ ಕನ್ನಡ 2, ವಿಜಯಪುರ 1 ಪ್ರಕರಣ ದಾಖಲಾಗಿದೆ.