ರಾಜ್ಯದಲ್ಲಿ ಒಟ್ಟು 1,159 ಕೇಸ್- 4 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

1 Min Read

ಬೆಂಗಳೂರು: ರಾಜ್ಯದಲ್ಲಿ ಇಂದು 1,159 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. 21 ಮಂದಿ ಸಾವನ್ನಪ್ಪಿದ್ದು, 1,112 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೀದರ್, ಹಾವೇರಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಒಟ್ಟು 18,412 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,50,604 ಮಂದಿಗೆ ಕೊರೊನಾ ಬಂದಿದೆ. 28,94,827 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.0.66ರಷ್ಟಿದೆ. ಕೋವಿಡ್-19 ಮರಣ ಪ್ರಮಾಣ ಶೇ.1.81ರಷ್ಟಿದೆ. ಇದನ್ನೂ ಓದಿ: ಪ್ರತಿ ಬುಧವಾರ 10 ಲಕ್ಷ ಲಸಿಕೆ ಗುರಿ: ಸುಧಾಕರ್

ಇಂದು ರಾಜ್ಯದಲ್ಲಿ ಒಟ್ಟು 7,50,992 ಮಂದಿಗೆ ಕೊರೊನಾ ಲಸಿಕೆ ನಿಡಲಾಗಿದೆ. ಒಟ್ಟು 1,75,319 ಸ್ಯಾಂಪಲ್ (ಆರ್‍ಟಿ ಪಿಸಿಆರ್ 1,42,586 + 32,733 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 359 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 7 ಜನ ಮರಣ ಹೊಂದಿದ್ದಾರೆ. 232 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಕೊರೊನಾದಿಂದ ಚೇತರಿಸಿಕೊಂಡವರಲ್ಲಿ ಕ್ಷಯ ರೋಗ ಪತ್ತೆ

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 2, ಬಳ್ಳಾರಿ 6, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 9, ಬೆಂಗಳೂರು ನಗರ 359, ಚಾಮರಾಜನಗರ 9, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 48, ಚಿತ್ರದುರ್ಗ 7, ದಕ್ಷಿಣ ಕನ್ನಡ 191, ದಾವಣಗೆರೆ 8, ಧಾರವಾಡ 8, ಗದಗ 4, ಹಾಸನ 81, ಕಲಬುರಗಿ 5, ಕೊಡಗು 95, ಕೋಲಾರ 32, ಕೊಪ್ಪಳ 3, ಮಂಡ್ಯ 20, ಮೈಸೂರು 91, ರಾಮನಗರ 1, ಶಿವಮೊಗ್ಗ 11, ತುಮಕೂರು 34, ಉಡುಪಿ 91, ಉತ್ತರ ಕನ್ನಡ 37, ಮತ್ತು ವಿಜಯಪುರದಲ್ಲಿ 4 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

Share This Article
Leave a Comment

Leave a Reply

Your email address will not be published. Required fields are marked *