ಧಾರವಾಡ: ಧಾರವಾಡ ಎಸ್ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಮತ್ತೆ ಕೊರೊನಾ ಸೋಂಕು ಸ್ಫೋಟಗೊಂಡಿದೆ. ಮಧ್ಯರಾತ್ರಿ ಮತ್ತೆ 116 ಜನರಲ್ಲಿ ಸೋಂಕು ದೃಢಪಟ್ಟಿದೆ. ಮೊದಲು 66 ಮಂದಿಯಲ್ಲಿ ಕಾಣಿಸಿಕೊಂಡಿತ್ತು. ಈಗ 66 ಸೇರಿ ಒಟ್ಟು 182 ಮಂದಿಗೆ ಕೊರೊನಾ ಬಂದಿದೆ.
ನ.17 ರಂದು ಕಾಲೇಜಿನ ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಲವು ಪಾಲಕರು ಕೂಡ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ. ಭಾಗಿಯಾಗಿದ್ದವರು ಕೋವಿಡ್ ಪರೀಕ್ಷೆಗೆ ಒಳಪಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಸೂಚಿಸಿದ್ದಾರೆ. ಇದನ್ನೂ ಓದಿ: ಕೋವಿಡ್ ಲಸಿಕೆ ಪಡೆದವರು ಯೂರೋಪ್ಗೆ ಪ್ರಯಾಣಿಸಲು 9 ತಿಂಗಳಷ್ಟೇ ಮಾನ್ಯತೆ
ಗುರುವಾರ ಸಂಜೆಯವರೆಗೆ ಮತ್ತೆ ಎಸ್ಡಿಎಂ ಆವರಣದಲ್ಲಿ 690 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಕಿಮ್ಸ್, ಡಿಮ್ಹಾನ್ಸ್ ಹಾಗೂ ಎಸ್ಡಿಎಂನ ಕೋವಿಡ್ ಪ್ರಯೋಗಾಲಯಗಳಲ್ಲಿ ಈ ಮಾದರಿಗಳನ್ನು ಪರೀಕ್ಷಿಸಲಾಗಿದೆ. 116 ಜನರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದನ್ನೂ ಓದಿ: ಬೆಂಗಳೂರಿನ ಶಾಲೆಯಲ್ಲಿ ಕೊರೊನಾ ಸ್ಫೋಟ – 33 ವಿದ್ಯಾಥಿಗಳಿಗೆ ಸೋಂಕು
ಮಧ್ಯರಾತ್ರಿಯ ನಂತರ ಈ ವರದಿಗಳು ಲಭ್ಯವಾಗಿದ್ದು, ಎಲ್ಲರೂ ಕೋವಿಡ್ ನಿರೋಧಕ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದಿರುವುದರಿಂದ ಯಾರಲ್ಲಿಯೂ ರೋಗದ ಗಂಭೀರ ಸ್ವರೂಪದ ಲಕ್ಷಣಗಳಿಲ್ಲ.