ತಿರುಪತಿ: ಕರ್ನಾಟಕದ 116 ವರ್ಷದ ನವನೀತಮ್ಮ (Tirumala) ಕಾಲ್ನಡಿಗೆಯಲ್ಲೇ ತಿರುಮಲ ಬೆಟ್ಟ ಏರಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಅವರ ಈ ಅಪರೂಪದ ಭಕ್ತಿ ಮತ್ತು ಸಾಧನೆ ದೇಶಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದ್ದು, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು (Chandrababu Naidu) ಎಕ್ಸ್ (X) ನಲ್ಲಿ ಪೋಸ್ಟ್ ಮಾಡುವ ಮೂಲಕ ಅವರನ್ನು ಹಾಡಿಹೊಗಳಿದ್ದಾರೆ.
ಕುಟುಂಬದ ಸದಸ್ಯರೊಂದಿಗೆ ನವನೀತಮ್ಮ ತಿರುಮಲದ ಮೆಟ್ಟಿಲುಗಳನ್ನು ಏರಿ ಸ್ವಾಮಿಯ ದರ್ಶನ ಪಡೆದಿದ್ದಾರೆ. ವಯಸ್ಸು ಎಷ್ಟೇ ಆಗಿದ್ದರೂ ಭಕ್ತಿ ಮತ್ತು ದೃಢಸಂಕಲ್ಪ ಇದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದನ್ನು ಅವರು ತೋರಿಸಿಕೊಟ್ಟಿದ್ದಾರೆ. ವೃದ್ಧೆ ಮೆಟ್ಟಿಲೇರುತ್ತಿರುವ ವಿಡಿಯೋ ನೋಡಿ ಸಾವಿರಾರು ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ನವನೀತಮ್ಮ ಅವರ ಭಕ್ತಿಯನ್ನು ಗಮನಿಸಿದ ತಿರುಮಲ ತಿರುಪತಿ ದೇವಸ್ಥಾನ (TTD) ಅಧಿಕಾರಿಗಳು ಅವರಿಗೆ ಮತ್ತು ಅವರ ಕುಟುಂಬಕ್ಕೆ ವಿಶೇಷ ವಿಐಪಿ ಬ್ರೇಕ್ ದರ್ಶನದ ವ್ಯವಸ್ಥೆ ಮಾಡಿದ್ದರು. ಇದರಿಂದ ಯಾವುದೇ ತೊಂದರೆ ಇಲ್ಲದೆ ಅವರು ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಪ್ರತಿಕ್ರಿಯೆ
ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಕೂಡ ನವನೀತಮ್ಮ ಅವರ ಯಾತ್ರೆಯನ್ನು ಶ್ಲಾಘಿಸಿದ್ದಾರೆ. “ಶುದ್ಧ ಭಕ್ತಿಗೆ ವಯಸ್ಸು ಅಡ್ಡಿಯಾಗುವುದಿಲ್ಲ. ಕರ್ನಾಟಕದ 116 ವರ್ಷದ ಅಜ್ಜಿ ಕಾಲ್ನಡಿಗೆಯಲ್ಲೇ ತಿರುಮಲ ತಲುಪಿ ಸ್ವಾಮಿಯ ದರ್ಶನ ಪಡೆದಿದ್ದಾರೆ. ಅವರ ಭಕ್ತಿಗೆ ಮತ್ತು ಅವರಿಗೆ ಬೆಂಬಲವಾಗಿ ನಿಂತ ಕುಟುಂಬಕ್ಕೂ ಅಭಿನಂದನೆಗಳು. ಇದು ನಿಜಕ್ಕೂ ಸ್ಪೂರ್ತಿದಾಯಕ ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಹಾವೇರಿಯಲ್ಲಿ ಮೋಡ ಬಿತ್ತನೆಗೆ ಚಾಲನೆ – ಅಗತ್ಯವಿದ್ದರೆ ರಾಜ್ಯದೆಲ್ಲೆಡೆ ವಿಸ್ತರಿಸಲು ಚಿಂತನೆ: ಸತೀಶ್ ಜಾರಕಿಹೊಳಿ
Age is truly just a number when it comes to pure devotion! Absolutely awestruck by this 116-year-old grandmother from Karnataka who trekked all the way up to Tirumala on foot to have the divine darshan of Lord Venkateswara Swamy. Wonderful to see her family supporting her… pic.twitter.com/Ke70jmKy4v
— N Chandrababu Naidu (@ncbn) July 5, 2026
ಮುಖ್ಯಮಂತ್ರಿಯ ಪೋಸ್ಟ್‌ಗೆ ಸಾವಿರಾರು ಜನ ಪ್ರತಿಕ್ರಿಯಿಸಿದ್ದು, ನವನೀತಮ್ಮ ಅವರ ಭಕ್ತಿ, ಧೈರ್ಯ ಮತ್ತು ಕುಟುಂಬದ ಬೆಂಬಲವನ್ನು ಮೆಚ್ಚಿಕೊಂಡಿದ್ದಾರೆ. ಅವರ ಈ ಯಾತ್ರೆ ಅನೇಕರಿಗೆ ಪ್ರೇರಣೆಯ ಕಥೆಯಾಗಿದೆ.ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಯುವಕನಿಗೆ ಪೊಲೀಸ್ ಠಾಣೆ ಎದುರೇ ಚಾಕು ಇರಿದ ಯುವತಿ ಮಾವ
