ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಭಾರೀ ಏರಿಕೆ ಕಾಣುತ್ತಿದೆ. ಇಂದು ಒಟ್ಟು 1,187 ಕೇಸ್ ದಾಖಲಾಗಿದೆ. 6 ಮರಣ ಪ್ರಕರಣ ದಾಖಲಾಗಿದ್ದು, ಬೆಂಗಳೂರಿನಲ್ಲಿ ಬರೋಬ್ಬರಿ 923 ಕೇಸ್ ದಾಖಲಾಗುವ ಮೂಲಕ ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 10,292ಕ್ಕೆ ಏರಿಕೆ ಕಂಡಿದೆ.
ರಾಜ್ಯದಲ್ಲಿ ಇಂದು ಒಟ್ಟು 275 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 30,09,557 ಮಂದಿಗೆ ಕೊರೊನಾ ಬಂದಿದೆ. 39,60,890 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.50 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.1.08 ರಷ್ಟಿದೆ. ಬೆಂಗಳೂರಿನಲ್ಲಿ ಒಟ್ಟು 923 ಪಾಸಿಟಿವ್ ಕೇಸ್ ದಾಖಲಾಗಿದ್ದು, 125 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 3 ಮರಣ ಪ್ರಕರಣ ದಾಖಲಾಗಿದೆ. ಓಮಿಕ್ರಾನ್ ಒಟ್ಟು ಪ್ರಕರಣ 66 ಸ್ಥಿರವಾಗಿದೆ. ಇದನ್ನೂ ಓದಿ: ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆ ನಾಳೆ, ನಾಡಿದ್ದು ತೀರ್ಮಾನ: ಬೊಮ್ಮಾಯಿ
ರಾಜ್ಯದಲ್ಲಿ ಇಂದು ಒಟ್ಟು 19,729 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,08,911 ಸ್ಯಾಂಪಲ್ (ಆರ್‌ಟಿಪಿಸಿಆರ್ 91,003 + 17,908 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಓಮಿಕ್ರಾನ್ ಸ್ಫೋಟ – ಬೆಂಗಳೂರಿನಲ್ಲಿ ಲಾಕ್‌ಡೌನ್ ಸುಳಿವು ನೀಡಿದ ಸಚಿವ ಆರ್.ಅಶೋಕ್
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 9, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 923, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 4, ಚಿತ್ರದುರ್ಗ 8, ದಕ್ಷಿಣ ಕನ್ನಡ 63, ದಾವಣಗೆರೆ 2, ಧಾರವಾಡ 15, ಗದಗ 0, ಹಾಸನ 6, ಹಾವೇರಿ 0, ಕಲಬುರಗಿ 9, ಕೊಡಗು 12, ಕೋಲಾರ 4, ಕೊಪ್ಪಳ 0, ಮಂಡ್ಯ 10, ಮೈಸೂರು 20, ರಾಯಚೂರು 0, ರಾಮನಗರ 3, ಶಿವಮೊಗ್ಗ 2, ತುಮಕೂರು 12, ಉಡುಪಿ 54, ಉತ್ತರ ಕನ್ನಡ 8, ವಿಜಯಪುರ 3 ಮತ್ತು ಯಾದಗಿರಿಯಲ್ಲಿ 0 ಪಾಸಿಟಿವ್ ಪ್ರಕರಣ ದಾಖಲಾಗಿದೆ.