Connect with us

Corona

ಮಂಡ್ಯ ಜಿಲ್ಲೆಯ ಗ್ರಾಮದಲ್ಲಿ 12 ಜನರಿಗೆ ಕೊರೊನಾ ಸೋಂಕು

Published

on

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಎಂ.ಶೆಟ್ಟಹಳ್ಳಿ ಗ್ರಾಮದಲ್ಲಿ ಇಂದು ಒಂದೇ ದಿನ 12 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಗ್ರಾಮವನ್ನು ಕಂಟೈನ್‍ಮೆಂಟ್ ವಲಯವಾಗಿ ಶ್ರೀರಂಗಪಟ್ಟಣ ತಹಶೀಲ್ದಾರ್ ರೂಪಾ ಘೋಷಣೆ ಮಾಡಿದ್ದಾರೆ.

ಒಂದೇ ದಿನ 12 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಎದುರಾಗಿದೆ. ಈ ಹಿನ್ನೆಲೆ ಇಂದು ಬೆಳಗ್ಗೆಯೇ ಗ್ರಾಮಕ್ಕೆ ಭೇಟಿ ನೀಡಿದ ಶ್ರೀರಂಗಪಟ್ಟಣ ತಹಶೀಲ್ದಾರ್ ರೂಪಾ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಈ ಗ್ರಾಮದ ಎಲ್ಲಾ ಗ್ರಾಮಸ್ಥರು ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಅಲ್ಲದೇ ಗ್ರಾಮದಲ್ಲಿ ಹಬ್ಬ ಹಾಗೂ ಇತರ ಕಾರ್ಯಕ್ರಮಗಳನ್ನು ಮಾಡಬಾರದು ಮತ್ತು ನೆಂಟರನ್ನು ಗ್ರಾಮಕ್ಕೆ ಕರೆಯದಂತೆ ಆದೇಶ ನೀಡಿದ್ದಾರೆ.