ಶ್ರೀನಗರ: ಈ ವರ್ಷದ ಆರಂಭದಲ್ಲಿ ಜಮ್ಮು ಕಾಶ್ಮೀರದಲ್ಲಿ ಉಗ್ರರು ಅತಿದೊಡ್ಡ ದಾಳಿ ನಡೆಸಿ 30 ಜನ ಸಿಆರ್‍ಪಿಎಫ್ ಯೋಧರನ್ನು ಹತ್ಯೆ ಮಾಡಿದ್ದಾರೆ.
ಪುಲ್ವಾಮಾ ಜಿಲ್ಲೆಯ ಅವಂತಿಪುರ ಸಮೀಪದ ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಆರ್‌ಪಿಎಫ್ ಯೋಧರಿದ್ದ ಬಸ್ ಮೇಲೆ ಸುಧಾರಿತ ಸ್ಫೋಟಕ ಸಾಮಾಗ್ರಿಗಳನ್ನು ಬಳಸಿ ದಾಳಿ ಮಾಡಿದ್ದಾರೆ. ಈ ಘಟನೆಯಲ್ಲಿ 30 ಮಂದಿ ಯೋಧರು ಹುತಾತ್ಮರಾಗಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
Advertisement
#UPDATE Eight CRPF jawans injured in the attack. #JammuandKashmir https://t.co/gkSqRihbuo
— ANI (@ANI) February 14, 2019
Advertisement
ಗಂಭೀರವಾಗಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸುಧಾರಿತ ಸ್ಫೋಟಕ ಸಾಧನಗಳಿಂದ ದಾಳಿ ಮಾಡಿದ ಪರಿಣಾಮ ಯೋಧರ ಮೃತ ದೇಹಗಳನ್ನು ಗುರುತು ಸಿಗದಂತೆ ರಸ್ತೆಯಲ್ಲಿ ಬಿದ್ದಿದೆ.
Advertisement
ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೊಲೀಸರು ರಕ್ಷಣಾ ಕಾರ್ಯ ನಡೆದಿದ್ದಾರೆ. ಪಾಕ್ ಮೂಲದ ಜೈಶ್ ಈ ಮೊಹಮ್ಮದ್ ಉಗ್ರ ಸಂಘಟನೆ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.
Advertisement
12 CRPF jawans have lost their lives in an IED blast in Awantipora, Pulwama. Dozens injured. #JammuAndKashmir (visuals deferred) pic.twitter.com/bONkKeFFxt
— ANI (@ANI) February 14, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv