ಬಾಗಲಕೋಟೆ: ಮುಧೋಳ (Bagalkot) ತಾಲೂಕಿನ ಮುಗಳಖೋಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ (Mid Day Meal) ಸೇವಿಸಿದ ಬಳಿಕ 12 ಮಕ್ಕಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಮಕ್ಕಳಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಸ್ವಸ್ಥಗೊಂಡ 12 ಮಕ್ಕಳ ಪೈಕಿ 9 ಮಂದಿಯನ್ನು ಮುಧೋಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 3 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಆಸ್ಪತ್ರೆಗೆ ರವಾನಿಸಲಾಗಿದೆ.
ಮಧ್ಯಾಹ್ನ ಬಿಸಿಯೂಟ ಸೇವಿಸಿದ ಕೆಲವೇ ಹೊತ್ತಿನಲ್ಲಿ ಮಕ್ಕಳಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದೆ. ಇದರಿಂದ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.ಇದನ್ನೂ ಓದಿ: 3 ವರ್ಷದ ಮಗು ಮೇಲೆ ಅತ್ಯಾಚಾರ – ಆರೋಪಿಗೆ 1 ಲಕ್ಷ ದಂಡ, ವಸೂಲಿ ಹಣದಲ್ಲಿ ಗುಂಡು-ತುಂಡು ಪಾರ್ಟಿ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ಮಕ್ಕಳು ಚೇತರಿಸಿಕೊಳ್ಳುತ್ತಿದ್ದು, ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.ಇದನ್ನೂ ಓದಿ: ಟೌನ್‌ಶಿಪ್ ಗಲಾಟೆಯಿಂದ ಸರ್ವೆ ಕಾರ್ಯ ಸ್ಥಗಿತ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಶ್ರೀನಿವಾಸ್ ಗೌಡ ಎಚ್ಚರಿಕೆ
