ಕಾಬೂಲ್: ಅಫ್ಘಾನಿಸ್ತಾನದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಕಾಬೂಲ್‍ನಲ್ಲಿ ಇಂದು ತ್ರಿವಳಿ ಬಾಂಬ್ ಸ್ಫೋಟಗೊಂಡ ಪರಿಣಾಮ 12 ಮಂದಿ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ.
ಸರ್ಕಾರಿ ನೌಕರರು ಪ್ರಯಾಣಿಸುತ್ತಿದ್ದ ಬಸ್ಸಿನಲ್ಲಿ ಮೊದಲ ಬಾಂಬ್ ಸ್ಫೋಟ ಸಂಭವಿಸಿದೆ. ಈ ವೇಳೆ ಗಣಿ ಮತ್ತು ಪೆಟ್ರೋಲಿಯಂ ಸಚಿವಾಲಯದ 5 ಸಿಬ್ಬಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಹಾಗೆಯೇ ಎರಡನೇ ಬಾಂಬ್ ಸ್ಫೋಟದಲ್ಲಿ 7 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
Advertisement
Advertisement
ಮೊದಲು ಮಿನಿಬಸ್‍ಗೆ ಅಂಟಿಸಲಾದ ಮ್ಯಾಗ್ನೆಟಿಕ್ ಬಾಂಬ್ ಸ್ಫೋಟಗೊಂಡಿದೆ. ನಂತರ ಸ್ಥಳಕ್ಕೆ ಬಂದ ಆತ್ಮಾಹುತಿ ಬಾಂಬ್ ದಾಳಿಕೋರನಿಂದ ಎರಡನೇ ಬಾಂಬ್ ಸ್ಫೋಟಗೊಂಡಿದೆ. ಬಳಿಕ ಅಪರಿಚಿತ ಉಗ್ರರು ಕಾರನ್ನು ಸ್ಫೋಟಿಸಿದಾಗ ಮೂರನೇ ಸ್ಫೋಟ ಸಂಭವಿಸಿದೆ ಎಂದು ಕಾಬೂಲ್‍ನ ಆಂತರಿಕ ಸಚಿವಾಲಯದ ವಕ್ತಾರ ನಸ್ರತ್ ರಹೀಮಿ ಹೇಳಿದ್ದಾರೆ.
Advertisement
ಈವರೆಗೆ ಸ್ಫೋಟಕ್ಕೆ ಒಟ್ಟು 12 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಏರುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ.
Advertisement
The Taliban once again claimed responsibility for the multiple terror attacks this morning in Kabul in which five women, a child, and two men are killed, and 21 other civilians wounded. This group must be held responsible for the heinous crimes they commit against the people.
— Sediq Sediqqi (@SediqSediqqi) July 25, 2019
ಈ ಮೂರು ದಾಳಿಗಳಲ್ಲಿ ಒಂದರ ಹೊಣೆಯನ್ನು ತಾಲಿಬಾನ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ವಿದೇಶಿ ಪಡೆಗಳ ಮೇಲೆ ನಾವು ದಾಳಿ ನಡೆಸಲು ಬಾಂಬ್ ಸ್ಫೋಟಿಸಿದ್ದೇವೆ. ಉಳಿದ ಎರಡು ದಾಳಿಗೂ ನಮಗೂ ಸಂಬಂಧವಿಲ್ಲ ಎಂದು ತಾಲಿಬಾನ್ ತಿಳಿಸಿರುವುದಾಗಿ ಅಫ್ಘಾನ್ ಅಧ್ಯಕ್ಷರ ವಕ್ತಾರ ಸೇದಿಕ್ ಸಿದ್ದೀಕಿ ಟ್ವೀಟ್ ಮಾಡಿದ್ದಾರೆ. ಹಾಗೆಯೇ ಅಮಾಯಕರ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಈ ದಾಳಿಯು ಕಾಬೂಲ್ ಹಾಗೂ ಅಫ್ಘಾನಿಸ್ತಾನದಲ್ಲಿ ಇರುವ ಉದ್ವಿಗ್ನ ಪರಿಸ್ಥಿತಿಯನ್ನು ಹೆಚ್ಚು ಮಾಡುವಂತಿದೆ. ತಾಲಿಬಾನ್ ಜೊತೆ ಅಮೆರಿಕ ಶಾಂತಿ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ಯೋಚಿಸುತ್ತಿದೆ. ಆದ್ರೆ ಉಗ್ರರು ಬಾಂಬ್ ದಾಳಿಗಳನ್ನು ಮಾಡಿ ಈ ಸಮರವನ್ನು ಉಲ್ಭಣಗೊಳಿಸುತ್ತಿದ್ದಾರೆ.