ಬೈರುತ್: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಮತ್ತೆ ಯುದ್ಧದ ಕಾರ್ಮೋಡ ಆವರಿಸಿದೆ. ಪ್ಯಾಲೆಸ್ತೀನ್ (Palestine) ವಿರುದ್ಧ ಸಮರ ಸಾರಿರುವ ಇಸ್ರೇಲ್ (Israel) ನೆರೆಯ ಲೆಬನಾನ್ (Lebanon) ಮೇಲೂ ದಾಳಿ ಮಾಡುತ್ತಿದೆ.
ಹೆಜ್ಬುಲ್ಲಾ (Hezbollah) ಉಗ್ರರನ್ನು ಗುರಿಯಾಗಿಸಿ ಇಸ್ರೇಲ್ ಪಡೆಗಳು ಬೈರುತ್ ನಗರ ಮೇಲೆ ವೈಮಾನಿಕ ದಾಳಿ ನಡೆಸಿವೆ. ಇದಕ್ಕೂ ಮುನ್ನ ಹೆಜ್ಬುಲ್ಲಾ ಪಡೆ ಇಸ್ರೇಲ್ ಸೇನೆಯ ಪ್ರಧಾನ ಕಚೇರಿ ಮೇಲೆಯೇ ದಾಳಿ ನಡೆಸಿತ್ತು. ಇದನ್ನೂ ಓದಿ: 17,000 ಕೆಲಸ ಕಡಿತಗೊಳಿಸಲಿದೆ ಬೋಯಿಂಗ್ – ಕಂಪನಿಯ 10% ಉದ್ಯೋಗಿಗಳ ಕೆಲಸಕ್ಕೆ ಕುತ್ತು
ಟೆಲ್ ಅವೀವ್‌ನಲ್ಲಿರುವ ಇಸ್ರೇಲ್ ಸೇನೆಯ ಮುಖ್ಯ ಕಚೇರಿ ಮೇಲೆ ನಾವು ಕ್ಷಿಪಣಿ ಉಡಾವಣೆ ಮಾಡಿದ್ದೇವೆ ಎಂದು ಹಿಜ್ಬುಲ್ಲಾ ಹೇಳಿಕೊಂಡಿತ್ತು. ಈ ಹೇಳಿಕೆಯ ಬೆನ್ನಲ್ಲೇ ಇಸ್ರೇಲ್ ಬೈರುತ್ ಮೇಲೆ ದಾಳಿ ಮಾಡಿದೆ. ಬೈರುತ್‌ನ ಹೆಜ್ಬೊಲ್ಲಾ ಪ್ರಾಬಲ್ಯವಿರುವ ಪ್ರದೇಶಗಳಿಂದ ಸ್ಥಳಾಂತರಗೊಳ್ಳುವಂತೆ ನಿವಾಸಿಗಳಿಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಸ್ರೇಲ್ ಸೇನೆ ಪೂರ್ವ ಬಾಲ್ಟಿಕ್ ಪ್ರದೇಶದ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿದೆ.
ಹಲವು ಕಟ್ಟಡಗಳಿಗೆ ಹಾನಿಯಾಗಿದ್ದು ವ್ಯಾಪಕ ನಾಶ-ನಷ್ಟ ಸಂಭವಿಸಿದೆ. ದಾಳಿ ನಡೆದ ಪ್ರದೇಶದಲ್ಲಿ ಬೆಂಕಿಯ ಜ್ವಾಲೆ ಮತ್ತು ಹೊಗೆಯ ಕಾರ್ಮೋಡ ಆಗಸಕ್ಕೆ ವ್ಯಾಪಿಸಿತ್ತು.
ಇಸ್ರೇಲಿ ನಡೆಸಿದ ದಾಳಿಯಲ್ಲಿ ಕನಿಷ್ಠ 12 ಜನರು ಗುರುವಾರ ಸಾವನ್ನಪ್ಪಿದ್ದಾರೆ ಎಂದು ಲೆಬನಾನ್ ತಿಳಿಸಿದೆ.