ಮುಂಬೈ: ಮಹಾರಾಷ್ಟ್ರದ (Maharashtra) ಕಂಕೇರ್ ಬಳಿಯ ಛತ್ತೀಸ್‌ಗಢ-ಗಡ್‌ಚಿರೋಲಿ ಗಡಿಯಲ್ಲಿರುವ ವಂಡೋಲಿ ಗ್ರಾಮದಲ್ಲಿ ಪೊಲೀಸ್ ಸಿ60 ಕಮಾಂಡೋಗಳು ನಡೆಸಿದ ಕಾರ್ಯಾಚರಣೆಯಲ್ಲಿ 12 ನಕ್ಸಲರು (Naxals) ಸಾವನ್ನಪ್ಪಿದ್ದಾರೆ.
ಕಾರ್ಯಾಚರಣೆ ವೇಳೆ ಸಬ್‌ಇನ್‌ಸ್ಪೆಕ್ಟರ್ ಸತೀಶ್ ಪಾಟೀಲ್ ಅವರ ಎಡ ಭುಜಕ್ಕೆ ಗುಂಡು ತಗುಲಿದೆ. ಈ ಪ್ರದೇಶದಲ್ಲಿ 12ರಿಂದ 15 ನಕ್ಸಲರು ಕ್ಯಾಂಪ್ ಮಾಡುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಆಧರಿಸಿ, ಉಪ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಲಾಗಿತ್ತು. ಇದನ್ನೂ ಓದಿ: ಅಗ್ನಿವೀರರಿಗೆ 10% ಮೀಸಲಾತಿ – ಸ್ವಂತ ಉದ್ಯಮ ಆರಂಭಿಸುವವರಿಗೆ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ: ಸಿಎಂ ಘೋಷಣೆ
ಎಲ್ಲಾ 12 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ವಯಂಚಾಲಿತ ಮೆಷಿನ್ ಗನ್‌ಗಳು, ಭಾರೀ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ನಕ್ಸಲೀಯರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.
ಎನ್‌ಕೌಂಟರ್‌ನಲ್ಲಿ ಸಬ್‌ಇನ್ಸ್‌ಪೆಕ್ಟರ್ ಮತ್ತು ಜವಾನ ಗಾಯಗೊಂಡಿದ್ದಾರೆ. ಆದರೆ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ರಾಜ್ಯ ಸರ್ಕಾರದ ಪರವಾಗಿ ಗಡ್ಚಿರೋಲಿ ಪೊಲೀಸರಿಗೆ 51 ಲಕ್ಷ ರೂ. ಬಹುಮಾನವನ್ನು ಘೋಷಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೇಳೆ ಬೆಲೆ ಇಳಿಕೆಗೆ ಕ್ರಮ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ