ಜೈಪುರ: ಶಾಲಾ ಶಿಕ್ಷಕರಿಂದ ಥಳಿತಕ್ಕೊಳಗಾಗಿ ಮೃತಪಟ್ಟಿರುವ ಘಟನೆಯಿಂದ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಉನ್ನತ ಸ್ಥಾನದಲ್ಲಿರುವವರೇ ರಾಜೀನಾಮೆ ನೀಡುತ್ತಿದ್ದಾರೆ.
ನಿನ್ನೆ ಸಂಜೆ ಜೈಪುರದ ಬರನ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಾಸಕ ಮನನೊಂದು ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಪಕ್ಷದ ಶಾಸಕ ಪಾನ್‌ಚಂದ್ ಮೇಘವಾಲ್ ಅವರಿಗೆ ಬೆಂಬಲ ವ್ಯಕ್ತಪಡಿಸಿ ಇಂದು ಬರನ್‌ನ 25 ಕಾಂಗ್ರೆಸ್ ಕೌನ್ಸಿಲರ್‌ಗಳ ಪೈಕಿ 12 ಮಂದಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ. ಇದನ್ನೂ ಓದಿ: ದಲಿತ ವಿದ್ಯಾರ್ಥಿ ಸಾವಿನಿಂದ ಮನನೊಂದು ಕಾಂಗ್ರೆಸ್ ಶಾಸಕ ರಾಜೀನಾಮೆ
Advertisement
Advertisement
ಏನಿದು ಪ್ರಕರಣ?
ಮಡಿಕೆಯಲ್ಲಿದ್ದ ನೀರು ಕುಡಿದಿದ್ದಕ್ಕಾಗಿ ಇಲ್ಲಿನ ಖಾಸಗಿ ಶಾಲೆಯ ಶಿಕ್ಷಕರೊಬ್ಬರು 9 ವರ್ಷದ ಪರಿಶಿಷ್ಟ ಜಾತಿಯ ಬಾಲಕ ಇಂದ್ರ ಮೇಘವಾಲ್‌ನನ್ನು ಹೊಡೆದಿದ್ದರು. ಇದರಿಂದ ಬಾಲಕ ನಾಲ್ಕು ದಿನಗಳ ಹಿಂದೆ ಮೃತಪಟ್ಟಿದ್ದ. ಜುಲೈ 20ರಂದು ಬಾಲಕನ ಮೇಲೆ ಹಲ್ಲೆ ನಡೆದಿತ್ತು. ಬಾಲಕನ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ಘೋಷಿಸಲಾಗಿತ್ತು. ಇದನ್ನೂ ಓದಿ: ಸೂರ್ಯನ ಅರ್ಧ ಆಯಸ್ಸು ಮುಕ್ತಾಯ – ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆಯ ವರದಿಯಲ್ಲಿ ಏನಿದೆ?
Advertisement
Rajasthan | Congress MLA Panachand Meghwal resigns from Atru assembly seat in Baran dist
"I'm deeply hurt by the death of 9-yr-old Dalit student in Jalore & I'm tendering my resignation. Dalits & deprived communities are being subjected to constant atrocities & torture," he said pic.twitter.com/v3X4XKoE2z
— ANI MP/CG/Rajasthan (@ANI_MP_CG_RJ) August 15, 2022
Advertisement
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಯಾವುದೇ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಶಾಸಕರೊಬ್ಬರು ರಾಜೀನಾಮೆ ಸಲ್ಲಿಸಿದ್ದರು. ಅವರ ನಿರ್ಧಾರವನ್ನು ಬೆಂಬಲಿಸಿ ಕೌನ್ಸಿಲರ್‌ಗಳಾದ ಯೋಗೇಂದ್ರ ಮೆಹ್ತಾ, ರೋಹಿತಾಶ್ವ ಸಕ್ಸೇನಾ, ರಾಜಾರಾಮ್ ಮೀನಾ, ರೇಖಾ ಮೀನಾ, ಲೀಲಾಧರ್ ನಗರ್, ಹರಿರಾಜ್ ಎರ್ವಾಲ್, ಪಿಯೂಷ್ ಸೋನಿ, ಊರ್ವಶಿ ಮೇಘವಾಲ್, ಯಶವಂತ್ ಯಾದವ್, ಅನ್ವರ್ ಅಲಿ, ಜ್ಯೋತಿ ಜಾತವ್ ಮತ್ತು ಮಯಾಂಕ್ ಮಾಥೋಡಿಯಾ ರಾಜೀನಾಮೆ ನೀಡಿದ್ದಾರೆ. ರಾಜಸ್ಥಾನದಲ್ಲಿ ದಲಿತರು ಹಾಗೂ ಶೋಷಿತ ವರ್ಗಗಳ ಮೇಲಿನ ದೌರ್ಜನ್ಯ ಕಂಡು ಮನನೊಂದು ರಾಜೀನಾಮೆ ನೀಡಲಾಗಿದೆ. ನಾವು ಬುಧವಾರ ಕೋಟಾ ವಿಭಾಗೀಯ ಕೌನ್ಸಿಲರ್‌ಗೆ ನಮ್ಮ ರಾಜೀನಾಮೆ ಪ್ರತಿಗಳನ್ನು ಸಲ್ಲಿಸುತ್ತೇವೆ ಎಂದು ಅವರು ಹೇಳಿದ್ದಾರೆ.